ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಕಾಂಗ್ರೆಸ್ ಭವನದ ಮುಂಭಾಗದಿಂದ ತಾಲ್ಲೂಕು ಕಚೇರಿಯವರೆಗೂ ಆಯೋಜಿಸಲಾಗಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ದೇಶದಲ್ಲಿ ನಿರುದ್ಯೋಗ ನಿವಾರಣೆ ಮಾಡುತ್ತೆವೆ ಎಂದು ಹೇಳಿ ಅಧಿಕಾರ ಹಿಡಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಏಳು ವರ್ಷ ಕಳೆದರೂ ಯಾರೊಬ್ಬರಿಗೂ ಉದ್ಯೋಗ ನೀಡಲಿಲ್ಲ ಬದಲಿಗೆ ದೇಶದ ಮತ್ತಷ್ಟು ಯುವಕರನ್ನು ನಿರುದ್ಯೋಗಳಾನ್ನಾಗಿಸಿದ್ದಾರೆ.
ದೇಶಾದ್ಯಂತ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಅಚ್ಚೇ ದಿನ್ ಆಶ್ವಾಸನೆ ನೀಡಿದ್ದ ಕೇಂದ್ರ ಸರ್ಕಾರ ದುಡ್ಡು ಹೊಡೆಯುವ ಕಾಯಕದಲ್ಲಿ ಮುಳುಗಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮಂತ್ರಿ ಮಂಡಲದಲ್ಲಿ ಹೊಂದಾಣಿಕೆ ಇಲ್ಲದೆ ಸರ್ಕಾರಿ ಕೆಲಸಗಳು ಸ್ತಬ್ಧವಾಗಿದೆ. ರಾಜ್ಯದ ಅಭಿವೃದ್ದಿಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುಧಾನ ನೀಡಿದ್ದು ವಿರೋಧ ಪಕ್ಷದ ಶಾಸಕರಿಗೆ ನೀಡುವ ಅನುಧಾನವನ್ನು ಕಡಿತಗೊಳಿಸಿದೆ ಎಂದರು.
ಕೊರೋನಾ ಹೆಸರಲ್ಲಿ ಕೋಟ್ಯಾಂತರ ರೂಪಾಯಿಗಳ ದುರುಪಯೋಗವೆಸಗಿರುವ ಸರ್ಕಾರ ಸರಿಯಾದ ದಾಖಲೆಗಳನ್ನು ನೀಡುತ್ತಿಲ್ಲ. ಸಾಮಾನ್ಯ ಜನರು ಬೀದಿಗಿಳಿದು ಹೋರಾಟ ಮಾಡುವ ಸಮಯ ಬಂದಿದ್ದು ಸರ್ಕಾರ ಕೂಡಲೇ ರಾಜೀನಾಮೆ ನೀಡುವ ಸಮಯ ಸನ್ನಿಹಿತವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ಮುಜಾಹಿದ್ ಪಾಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ. ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಭ್ರಮಣಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಲ್.ಮಧುಸೂದನ್, ಮುಖಂಡರಾದ ದೊಗರನಾಯಕನಹಳ್ಳಿ ವೆಂಕಟೇಶ್, ಗೊರಮಿಲ್ಲಹಳ್ಳಿ ವೆಂಕಟೇಶ್, ಮತ್ತಿತರರು ಪಾಲ್ಗೊಂಡಿದ್ದರು.
ಜು ೦೭, ಎಸ್ ಡಿ ಎಲ್ ಪಿ ೦೧ : ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಕಾಂಗ್ರೆಸ್ ಭವನದ ಮುಂಭಾಗದಿAದ ತಾಲೂಕು ಕಚೇರಿಯವರೆಗೂ ಆಯೋಜಿಸಲಾಗಿದ್ದ ಸೈಕಲ್ ಜಾಥಾಗೆ ಶಾಸಕ ವಿ.ಮುನಿಯಪ್ಪ ಚಾಲನೆ ನೀಡಿದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi