ನಗರದಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ನಗರಸಭೆ ಸಿಬ್ಬಂದಿ ದಂಡ ವಿಧಿಸುತ್ತಿದ್ದಾರೆ.
ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹರಸಾಹಸ ಪಟ್ಟಿದೆ. ಕೊರೊನಾ ನಿಯಂತ್ರಣಕ್ಕೆ ಬಂತು ಎಂದು ಜನ ನಿಟ್ಟುಸಿರುಬಿಟ್ಟರೂ, ಮತ್ತೆ ಕೋವಿಡ್ ಮೂರನೇ ಅಲೆಯ ಭೀತಿ ಶುರುವಾಗಿದೆ. ಜನರು ಮಾಸ್ಕ್ ಧರಿಸದೇ ದೈಹಿಕ ಅಂತರ ಮರೆತು ಅಡ್ಡಾದಿಡ್ಡಿ ಓಡಾಡುತ್ತಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಅರಿವು ಮೂಡಿಸಲು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿದ್ದೇವೆ ಎಂದು ಪೌರಾಯುಕ್ತ ಶ್ರೀಕಾಂತ್ ತಿಳಿಸಿದರು.
ತಾಲ್ಲೂನಲ್ಲಿ ಶೂನ್ಯಕ್ಕೆ ಬಂದಿದ್ದ ಸೋಂಕು, ಮತ್ತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಸಾರ್ವಜನಿಕರ ಅರಿವು ಮೂಡಿಸಲು ರಸ್ತೆಗೆ ಇಳಿದು ಕೋವಿಡ್ ನಿಯಮಗಳನ್ನು ಪಾಲಿಸದ ಜನರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಈಗಾಗಲೇ ಮೂರನೇ ಅಲೆ ಬೀತಿ ಆರಂಭವಾಗಿದೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಅದರಂತೆ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಜನರಿಗೆ ಕೊರೋನಾ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಸಿ ದಂಡ ವಿಧಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಶಿವಶಂಕರ್, ಕಂದಾಯ ನಿರೀಕ್ಷಕ ವಿ.ಆರ್.ವೆಂಕಟೇಶ್, ಆರೋಗ್ಯ ನಿರೀಕ್ಷಕ ರಾಜೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi