ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಕೋವಿಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬೆಂಗಳೂರು ನಗರ ಮತ್ತು ಹೊರ ರಾಜ್ಯಗಳಿಂದ ಬರುವ ಜನರ ಬಗ್ಗೆ ವಿಶೇಷ ನಿಗಾ ವಹಿಸಿ ಅವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಬೇಕು ಎಂದು ನೋಡಲ್ ಅಧಿಕಾರಿ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು.
ಕೊರೊನಾ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಲು ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಹಕರಿಸಬೇಕೆಂದು ಮನೆಮನೆಗೂ ಹೋಗಿ ವ್ಯಾಪಕವಾಗಿ ಪ್ರಚಾರ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಒ ಪ್ರಶಾಂತ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.