ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಡಿ.ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಸರಳ ಸಜ್ಜನಿಕೆಯ ರಾಜಕಾರಣಿ, ಮುತ್ಸದ್ದಿ, ದಿವಂಗತ ಡಿ.ದೇವರಾಜ ಅರಸು ಅವರ ಜೀವನಶೈಲಿ ಪ್ರತಿಯೊಬ್ಬ ನಾಗರಿಕರು ಸೇರಿದಂತೆ ಇಂದಿನ ರಾಜಕಾರಣಿಗಳಿಗೆ ಮಾರ್ಗದರ್ಶನವಾಗಬೇಕು. ಹಿಂದುಳಿದ ವರ್ಗಗಳ ಇಲಾಖೆಯನ್ನು ಹುಟ್ಟುಹಾಕುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡಾ ನ್ಯಾಯವನ್ನು ಒದಗಿಸಿದ ಕೀರ್ತಿ ದಿವಂಗತ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.
ಸಮಾಜದಲ್ಲಿದ್ದ ಅನಿಷ್ಟಪದ್ದತಿಗಳನ್ನು ತೊಲಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ನಡೆಸಿ ಬಾಲ್ಯವಿವಾಹ, ತಲೆಯ ಮೇಲೆ ಮಲಹೊರುವ ಪದ್ದತಿ, ಸೇರಿದಂತೆ ಅನೇಕ ಅನಿಷ್ಟ ಪದ್ದತಿಗಳನ್ನು ನಿಷೇಧ ಮಾಡುವುದರ ಜೊತೆಗೆ 20 ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತಂದರು. ರಾಜ್ಯವನ್ನು ದೇಶದಲ್ಲಿಯೆ ಮಾದರಿಯ ರಾಜ್ಯವನ್ನಾಗಿ ಮಾಡುವ ಮೂಲಕ ಅವರ ಕಾರ್ಯವೈಖರಿಯನ್ನು ಇತರೇ ರಾಜ್ಯಗಳಲ್ಲಿಯೂ ಅಳವಡಿಸಿಕೊಳ್ಳುವಂತೆ ಮಾಡಿದರು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್, ಬಿ.ಸಿ.ಎಂ. ಇಲಾಖಾಧಿಕಾರಿ ನಾರಾಯಣಸ್ವಾಮಿ, ನಗರ ಠಾಣೆ ಪಿಎಸ್ಸೈ ಸತೀಶ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi