ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಹಾಗೂ ದೇವರ ಮಳ್ಳೂರು ಗ್ರಾಮಗಳಿಗೆ ಬುಧವಾರ ಜಿಲ್ಲಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಗ್ರಾಮಗಳ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಕ್ಕೆ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಗಳ ಕಾರ್ಯವೈಖರಿ ಬಗ್ಗೆ ಪರಿಶೀಲಿಸಿದರು.
ಟಾಸ್ಕ್ ಫೋರ್ಸ್ ನ ನೋಡಲ್ ಅಧಿಕಾರಿಗಳು, ಸದಸ್ಯರು ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿ ಯಲ್ಲಿನ ಪ್ರತಿ ಮನೆಗಳಿಗೆ ಪ್ರತಿದಿನ ಕಡ್ಡಾಯವಾಗಿ ಭೇಟಿ ನೀಡಿ ಮನೆಯಲ್ಲಿನ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಬೇಕು. ಹೋಂ ಐಸೋಲೇಷನ್ ನಲ್ಲಿ ಇರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸಬೇಕೆಂದು ಜಿಲ್ಲಾಧ್ಕಾರಿ ಆರ್.ಲತಾ ಅವರು ಸೂಚಿಸಿದರು.
ತಾಲ್ಲೂಕಿನ ಸುಂಡ್ರಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ, ಸೋಂಕಿತರೊಂದಿಗೆ ಮಾತನಾಡಿದರು. ಆಹಾರ, ಶುಚಿತ್ವ, ಯೋಗ ಕ್ಷೇಮ, ಆರೋಗ್ಯ ಹಾಗೂ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಸೋಂಕಿತರೆಲ್ಲರೂ ವ್ಯವಸ್ಥೆ ಹಾಗೂ ಚಿಕಿತ್ಸೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್, ತಹಶೀಲ್ದಾರ್ ರಾಜೀವ್ ಹಾಗೂ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi