ಸಿಡಿಲು ಬಡಿದು ಓರ್ವ ಮಹಿಳೆ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಮೃತಪಟ್ಟಿದ್ದು ಮತ್ತೊಬ್ಬ ಮಹಿಳೆ ತೀವ್ರ ಗಾಯಗೊಂಡಿರುವ ಘಟನೆ ಕುಂದಲಗುರ್ಕಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ನಾಗಮ್ಮ(48) ಮೃತ ದುರ್ದೈವಿಯಾಗಿದ್ದು ಅರುಣಾ ಎಂಬಾಕೆ ತೀವ್ರ ಗಾಯಗೊಂಡಿದ್ದಾಳೆ ಎನ್ನಲಾಗಿದೆ.
ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಬುಧವಾರ ಸಂಜೆ ಸಿಡಿಲು ಬಡಿದು ನಾಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಬೀರವಾಗಿ ಗಾಯಗೊಂಡಿರುವ ಅರುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Be a reporter
ಊರಿನ ಸುದ್ದಿ, ಫೋಟೋ ಕಳುಹಿಸಿ.
Send news



