ಶಿಡ್ಲಘಟ್ಟ ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ನೀಡಿದ 48,000 ರೂ ಮೌಲ್ಯದ ಔಷಧಿಗಳನ್ನು ಹಸ್ತಾಂತರಿಸಿ ಜಿಲ್ಲಾ ನಿರ್ದೇಶಕ ಪ್ರಶಾಂತ್ ಮಾತನಾಡಿದರು.
ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು ಸಾವಿರಾರು ಕುಟುಂಬಕ್ಕೆ ದಾರಿದೀಪವಾಗಿದ್ದಾರೆ. ಕೋವಿಡ್ ಎರಡನೆ ಅಲೆಯ ಸಂಕಷ್ಟದ ಈ ಸಮಯದಲ್ಲಿ ಸೋಂಕಿತರರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಾಗುತ್ತಿದೆ. ಸೋಂಕಿತರಿಗೆ ಅಗತ್ಯವಿರುವ ಔಷಧಿಗಳನ್ನು ನೀಡುವ ಮೂಲಕ ಅವರ ಆರೋಗ್ಯ ಸುಧಾರಿಸಿಕೊಳ್ಳಲೆಂದು ಕೋರುತ್ತಿರುವುದಾಗಿ ಹೇಳಿದರು.
ಶಿರಸ್ತೇದಾರ್ ಮಂಜುನಾಥ್ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಸಂಕಷ್ಟದಲ್ಲಿರುವ ಜನರಿಗೆ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು, ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಹಣಕಾಸು ಪ್ರಭಂಧಕ ಕಿರಣ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಾಣಿ, ಹಿರಿಯ ಆರೋಗ್ಯ ಪರೀವೀಕ್ಷಣಾಧಿಕಾರಿ ಶಶಿಕುಮಾರ್, ತಾಲ್ಲೂಕು ಮೇಲ್ವಿಚಾರಕರಾದ ಸಿ. ಮುನಿರತ್ನಮ್ಮ, ಆರೋಗ್ಯ ನೀರೀಕ್ಷಕರಾದ ದೇವರಾಜ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi