ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ಎಸ್.ಗೋಪಾಲರೆಡ್ಡಿ ಉಪಾಧ್ಯಕ್ಷರಾಗಿ ಎಚ್.ಗೀತಾ ಆಯ್ಕೆಯಾಗಿದ್ದಾರೆ.
ಒಟ್ಟು 17 ಸದಸ್ಯ ಬಲ ಹೊಂದಿರುವ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಲಾಗಿದ್ದು ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ದೊಡ್ಡತೇಕಹಳ್ಳಿಯ ಟಿ.ಎಸ್.ಗೋಪಾಲರೆಡ್ಡಿ ಹಾಗೂ ಚಿಕ್ಕತೇಕಹಳ್ಳಿಯ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಮರಿಹಳ್ಳಿಯ ಎಚ್.ಗೀತಾ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಉಪಾಧ್ಯಕ್ಷರಾಗಿ ಎಚ್.ಗೀತಾ ಅವಿರೋಧವಾಗಿ ಆಯ್ಕೆಯಾದರೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಎಸ್.ಗೋಪಾಲರೆಡ್ಡಿ 11 ಮತಗಳನ್ನು ಪಡೆಯುವ ಮೂಲಕ ತನ್ನ ಪ್ರತಿಸ್ಫರ್ಧಿ ವೆಂಕಟೇಶಪ್ಪ (6 ಮತಗಳು) ರನ್ನು ಪರಾಭವಗೊಳಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೃಷಿ ಇಲಾಖೆಯ ಉಪನಿರ್ದೇಶಕ ಎಚ್.ಎಲ್.ಚಂದ್ರಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಓ ಕೆ.ಎನ್.ರಮೇಶ್‌ರೆಡ್ಡಿ ಹಾಜರಿದ್ದರು.