Doddatekahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಲಕ್ಷ್ಮಮ್ಮಬೈರಾರೆಡ್ಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದು ಇವರಿಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಗಳು ಘೋಷಿಸಿದರು.
ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯು ಕಾಂಗ್ರೆಸ್ ಆಡಳಿತದ ಹಿಡಿತಕ್ಕೆ ಬಂದಿದ್ದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮಾತನಾಡಿ, ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಭದ್ರವಾಗಿದ್ದು ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ಇದರಿಂದ ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಆಶಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು. ಪಂಚಾಯಿತಿಯ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು, ಪಿಡಿಒ, ಕಾರ್ಯದರ್ಶಿ ಹಾಜರಿದ್ದರು.