Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ ಶಾಲೆಯಲ್ಲಿ (Dolphin Public School) CBSE ವಿಭಾಗದಲ್ಲಿ 2022-2023 ನೇ ಸಾಲಿನ ವಿದ್ಯಾರ್ಥಿ ಪರಿಷತ್ ಚುನಾವಣೆಗೆ (Student Council Election) ಚಾಲನೆ ನೀಡಿ ಡಾಲ್ಫಿನ್ ಸಂಸ್ಥೆಯ (Dolphin Group Of Institution) ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಓದುವುದರ ಜೊತೆಗೆ ಪ್ರತಿಯೊಬ್ಬರು ತಮ್ಮ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸಮರ್ಥರಾಗಬೇಕು ಹಾಗೂ ಸಂವಿಧಾನದ ರೀತಿ ನೀತಿಯನ್ನು ಪ್ರಾಯೋಗಿಕವಾಗಿ ಕಲಿಯಬೇಕು ಎಂಬ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣಾ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಡಾಲ್ಫಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ.ನಾಗರಾಜ್ ಮತ ಚಲಾಯಿಸಿ, ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ತತ್ವಗಳನ್ನು ಅನುಸರಿಸುತ್ತಾ ನಾಯಕತ್ವ ಗುಣಗಳನ್ನು ಮೈಗೂಡಿಸಿ ಕೊಳ್ಳಬೇಕು ಎಂದು ಹೇಳಿದರು.
ಈ ಚುನಾವಣೆಯಲ್ಲಿ ಸುಮಾರು 30 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಎಲ್ಲರಿಗೂ ಚುನಾವಣಾ ನೀತಿ ಪ್ರಣಾಳಿಕೆಯಂತೆ ಅಭ್ಯರ್ಥಿಗಳಿಗೆ ಗುರುತು ನೀಡಲಾಗಿತ್ತು.
ಸಂಸ್ಥೆಯ ಪ್ರಾಂಶುಪಾಲರಾದ ಸುದರ್ಶನ್, ಮುನಿಶಾಮಪ್ಪ, ನೂರ್ಜನ್ ಬೇಗಂ, ಆರಿಫ್, ಶಿಕ್ಷಕಿ ಸುನೀತಾ, ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ವಿಜ್ಞಾನ ಮುಖ್ಯಸ್ಥ ಶ್ರೀನಿವಾಸಯ್ಯ, ಮತಗಟ್ಟೆ ಅಧಿಕಾರಿಯಾಗಿದ್ದ ಕನ್ನಡ ವಿಭಾಗದ ಮುಖ್ಯಸ್ಥ ಎನ್.ರಾಮಾಂಜಿ, ಸತ್ಯನಾರಾಯಣ, ಇಸ್ಮಾಯಿಲ್, ದೈಹಿಕ ಶಿಕ್ಷಕರಾದ ಭರತ್, ದೇವರಾಜ್ ಹಾಗೂ ಸಿಬ್ಬಂದಿ ಹಾಜರಿದ್ದರು.