ತೋಟವೊಂದರಲ್ಲಿ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಶಿಡ್ಲಘಟ್ಟ ನಗರದ ಹೊರವಲಯದ ಇದ್ಲೂಡು ರಸ್ತೆಯ ಮಾರುತಿನಗರದ ಬಳಿ ಗುರುವಾರ ನಡೆದಿದೆ.
ಮಾರುತಿ ನಗರದ ದೇವೀರಮ್ಮ (50) ಮೃತ ದುರ್ದೈವಿ ಎನ್ನಲಾಗಿದೆ.
ಮಾರುತಿನಗರದ ಬಳಿಯ ತೋಟವೊಂದರಲ್ಲಿ ದನ ಕರುಗಳಿಗೆ ಮೇವು ತರಲೆಂದು ಹೋದ ದೇವೀರಮ್ಮನಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಬುಧವಾರ ಸಂಜೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಗುರುವಾರ ಬೆಳಗ್ಗೆಯಾದರೂ ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಬಾರದೇ ಇದ್ದ ಹಿನ್ನಲೆಯಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೇ ಕೂಡಲೇ ನಿರ್ಲಕ್ಷ್ಯ ಬಹಿಸಿದ ಸಿಬ್ಬಂದಿಯನ್ನು ಅಮಾನತ್ತು ಮಾಡಬೇಕು ಮತ್ತು ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಸ್ಥಳೀಯರು ಸೇರಿದಂತೆ ವಿವಿಧ ರೈತ ಮುಖಂಡರು ಕೆಲ ಕಾಲ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಬೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿ ಮುಕ್ತಾಂಭ, ಚಿಂತಾಮಣಿ ಉಪವಿಭಾಗದ ಇಇ ಶಿವಕುಮಾರ್, ಎಇಇ ರೆಹಮಾನ್ ಭೇಟಿ ನೀಡಿ ಸ್ಥಳೀಯರ ಮನವಿ ಆಲಿಸಿದ ನಂತರ ಘಟನೆಗೆ ಕಾರಣರಾದ ಲೈನ್ ಮೆನ್‌ನ ಅಮಾನತ್ತು ಮಾಡುವುದು ಮತ್ತು ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi