Sidlaghatta : ಆಕಸ್ಮಿಕ ಬೆಂಕಿಗೆ ರಾಗಿ ಹಾಗು ರಾಗಿ ಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿದ್ದು ನಷ್ಟಗೊಂಡ ರೈತನಿಗೆ ಕೂಡಲೇ ಸರ್ಕಾರದಿಂದ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಪದಾಧಿಕಾರಿಗಳು ತಹಸೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು.
ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಮರಿಹಳ್ಳಿ ಗ್ರಾಮದ ಹನುಮಪ್ಪ ಎಂಬ ರೈತ ತನ್ನ ಜಮೀನಿನಲ್ಲಿ ಬೆಳೆದ ರಾಗಿ ಕೊಯಲು ಮಾಡಿ ಕುಪ್ಪೆ ಹಾಕಿದ್ದು ರಾಗಿಗೆ ಆಕಸ್ಮಿಕ ಬೆಂಕಿ ಬಿದ್ದು ಸುಮಾರು ೫೦ ಕ್ವಿಂಟಾಲ್ ರಾಗಿ ಹಾಗು ೩ ಲೋಡ್‌ನಷ್ಟು ರಾಗಿ ಹುಲ್ಲು ಸುಟ್ಟು ಕರಕಲಾಗಿದೆ. ಇದು ಯಾರೋ ಉದ್ದೇಶ ಪುರ್ವಕವಾಗಿ ಮಾಡಿದ್ದಾರೋ ಅಥವ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆಯೋ ಗೊತ್ತಿಲ್ಲವಾದರೂ ರೈತ ಹನುಮಪ್ಪ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹಾಗಾಗಿ ಈ ಕೂಡಲೇ ಸರ್ಕಾರದಿಂದ ಕನಿಷ್ಠ ೧ ಲಕ್ಷ ರೂಗಳ ಪರಿಹಾರ ಧನ ವಿತರಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಬಿ.ಎಸ್.ರಾಜೀವ್‌ರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುವ ಜೊತೆಗೆ ನಷ್ಟಕ್ಕೊಳಗಾಗಿರುವ ರೈತನಿಗೆ ಸರ್ಕಾರದಿಂದ ಸಿಗಬೇಕಿರುವ ಪರಿಹಾರ ಧನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನ್‌ಕುಮಾರ್, ಕಾರ್ಯಾಧ್ಯಕ್ಷ ವಿ.ಮುನಿಯಪ್ಪ, ಉಪಾಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ಮಂಜುನಾಥ್, ಪ್ರಕಾಶ್, ಎಸ್.ಎನ್.ಮಾರಪ್ಪ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.