ಶಿಡ್ಲಘಟ್ಟ ನಗರದ ಕೋಟೆ ವೃತ್ತದಲ್ಲಿ ಶುಕ್ರವಾರ ರೈತ ಮುಖಂಡರಾದ ಜಿ.ಟಿ.ರಾಮಸ್ವಾಮಿ ಹಾಗೂ ಚನ್ನಪಟ್ಟಣ ರಾಮು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ) ಬಣದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಮಾತನಾಡಿದರು.
ರೈತ ಹುತಾತ್ಮ ದಿನಾಚರಣೆಯಲ್ಲಿ ಭಾಗಿಯಾಗಿ ಊರಿಗೆ ವಾಪಸ್ ಮರಳುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ರೈತ ಚೇತನಗಳಾದ ಜಿ.ಟಿ.ರಾಮಸ್ವಾಮಿ ಹಾಗೂ ಚನ್ನಪಟ್ಟಣ ರಾಮು ರವರ ಅಗಲಿಕೆ ರಾಜ್ಯದ ರೈತರಿಗೆ ತುಂಬಲಾರದ ನಷ್ಟವಾಗಿದೆ ಎಂದು ಅವರು ತಿಳಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ರಾಮಸ್ವಾಮಿ ಹಾಗೂ ರೈತ ಸಂಘದ ಕಾರ್ಯದರ್ಶಿ ರಾಮು ರವರು ರೈತರಿಗಾಗಿ ಮಾಡಿರುವ ಸೇವೆ ಅಪಾರವಾದದ್ದು. ರೈತರ ಪರ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನಡೆಸಿದ್ದ ಅವರ ಹೋರಾಟಗಳು ನಮಗೆಲ್ಲಾ ಆದರ್ಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಸಿ.ಎಂ.ಬೈರೇಗೌಡ, ರೈತ ಮುಖಂಡರಾದ ಚಿಂತಡಿಪಿ ಮಾರುತಿ, ಚನ್ನೇಗೌಡ, ನಾಗರಾಜು, ಸೋಮಶೇಖರ್, ರಮೇಶ್, ಮುರಳಿ, ಶ್ರೀಧರ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi