ಗಾಂಧಿ–ಶಾಸ್ತ್ರಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭೆ, ಉಚಿತ ಆರೋಗ್ಯ ತಪಾಸಣಾ ಶಿಬಿರ

Sidlaghatta free health checkup camp special gram sabha Gandhi Jayanti

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಗ್ರಾಮಸಭೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತೀಕ್ ಪಾಷಾ ಭೇಟಿ ನೀಡಿ ಪರಿಶೀಲಿಸಿದರು.

ತಾಲ್ಲೂಕಿನ ಅಬ್ಲೂಡು, ದೊಡ್ಡತೇಕಹಳ್ಳಿ, ಹೊಸಪೇಟೆ, ಎಸ್. ದೇವಗಾನಹಳ್ಳಿ, ತುಮ್ಮನಹಳ್ಳಿ ಹಾಗೂ ಈ. ತಿಮ್ಮಸಂದ್ರ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭೆಗಳ ಜತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು.

ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಶಿಬಿರಕ್ಕೆ ಭೇಟಿ ನೀಡಿದ ಅತೀಕ್ ಪಾಷಾ ಅವರು, ಆರೋಗ್ಯ ತಪಾಸಣಾ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಪಡೆದುಕೊಂಡು, ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಶಿಬಿರದಲ್ಲಿ ಯಾವ ತಪಾಸಣೆಗಳು ನಡೆದವು?

ಶಿಬಿರದಲ್ಲಿ ಸಾರ್ವಜನಿಕರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು. ವೈದ್ಯಕೀಯ ಸಿಬ್ಬಂದಿ ಸಕ್ಕರೆ ಕಾಯಿಲೆ, ಹೃದಯ ಬಡಿತ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಕ್ಷಯರೋಗ ಹಾಗೂ ಕುಷ್ಠರೋಗ ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣೆ ನಡೆಸಿದರು. ಕಣ್ಣಿನ ತಪಾಸಣೆಯನ್ನೂ ಕೈಗೊಂಡು ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಅಬ್ಲೂಡು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸ್ವಾಮಿ.ಪಿ., ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ್, ಅಬ್ಲೂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ, ಫಾರ್ಮಸಿ ಅಧಿಕಾರಿ ರಹಮ್ಮತ್ತುಲ್ಲಾ, PHCO ಸಮೀರಾ, ನೇತ್ರ ಸಹಾಯಕಿ ಅನುಷಾ, ವೈದ್ಯಾಧಿಕಾರಿ ಯಶ್ವಂತ್ ಪ್ರಸಾದ್, ಜಿಲ್ಲಾ ಪಂಚಾಯಿತಿ ADPC ಹರೀಶ್, ತಾಲ್ಲೂಕು IEC ಸಂಯೋಜಕ ಲೋಕೇಶ್, ಎಂಜಿನಿಯರ್ ಗೌತಮ್ ರಾಜ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

More

Share
error: Content is protected !!