Home News ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

0
Ganesha Idol Government guidelines

Sidlaghatta : ಶಿಡ್ಲಘಟ್ಟ ನಗರ ಮತ್ತು ತಾಲ್ಲೂಕಿನಾದ್ಯಂತ ಈ ಭಾರಿ ಗಣೇಶ ಪ್ರತಿಷ್ಠಾಪನೆ (Ganesha Idol) ಮಾಡುವ ಸಂಘ ಸಂಸ್ಥೆಗಳು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯುವ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು (Government guidelines) ಕಡ್ಡಾಯವಾಗಿ ಪಾಲಿಸಬೇಕು ಎಂದು ಎ.ಎಸ್.ಪಿ ಕುಶಾಲ್‌ಚೌಕ್ಸಿ ಹೇಳಿದರು.

ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಗುರುವಾರ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಭಾರಿ ಗಣೇಶ ಪ್ರತಿಷ್ಠಾಪನೆ ಬಗ್ಗೆ ಸರ್ಕಾರ ಹಲವು ಮಾರ್ಗಸೂಚಿಗಳು ಹೊರಡಿಸಿರುವ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಸರ್ಕಾರದ ಸಲಹೆ, ಸೂಚನೆಗಳನ್ನು ಪಾಲಿಸಬೇಕು. ಸಾರ್ವಜನಿಕ ಸಂಘ ಸಂಸ್ಥೆಗಳು ಕಡ್ಡಾಯವಾಗಿ ನಗರಸಭೆ, ಗ್ರಾಮಪಂಚಾಯಿತಿ, ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದ ನಂತರವಷ್ಟೇ ಗಣೇಶ ಪ್ರತಿಷ್ಠಾಪಿಸಬೇಕು. ಅನುಮತಿಯಿಲ್ಲದೇ ಪ್ರತಿಷ್ಠಾಪಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇನ್ನು ಪ್ರತಿಷ್ಠಾಪನಾ ಸ್ಥಳ ಸೇರಿದಂತೆ, ಮೆರವಣಿಗೆ ಹಾಗೂ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಈ ಭಾರಿ ಡಿಜೆ ಬಳಸುವಂತಿಲ್ಲ. ಪ್ರತಿಯೊಬ್ಬರೂ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಹಬ್ಬಗಳನ್ನು ಆಚರಿಸಿ ಸಂಭ್ರಮ ಪಡಬೇಕೆ ಹೊರತು ಹಬ್ಬಗಳ ಹೆಸರಿನಲ್ಲಿ ಅಹಿತಕರ ಘಟನೆಗಳಾಗುವುದಕ್ಕೆ ಯಾರೂ ಆಸ್ಪದ ನೀಡಬಾರದು. ಗಣೇಶೋತ್ಸವವನ್ನು ಸಾಮರಸ್ಯ ಕಾಪಾಡುವ ಮೂಲಕ ಆಚರಿಸಿಬೇಕು ಎಂದರು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ಗಣೇಶ ಪ್ರತಿಷ್ಠಾಪನೆಗೂ ಮುಂಚೆ ನಗರಸಭೆ, ಬೆಸ್ಕಾಂ, ಪೋಲಿಸ್ ಠಾಣೆಗಳಲ್ಲಿ ಶುಲ್ಕ ಪಾವತಿಸಿ ಲಿಖಿತ ಮನವಿ ಸಲ್ಲಿಸಬೇಕು. ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳ ಪದಾಧಿಕಾರಿಗಳ ವಿವರ ಸಲ್ಲಿಸಬೇಕು. ಸಂಘಟಕರು ಕಡ್ಡಾಯವಾಗಿ ಆಧಾರ್ ಹಾಗೂ ಮತದಾರರ ಗುರುತಿನ ಚೀಟಿ ನೀಡಬೇಕು. ಆಯಾ ಇಲಾಖೆಯ ಅಧಿಕಾರಿಗಳು ಸೂಚಿಸುವ ಎಲ್ಲ ಷರತ್ತುಗಳಿಗೆ ಬದ್ದವಾಗಿರಬೇಕೆಂದರು.

ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಹಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗಳನ್ನು ಮಾಡಬೇಕು. ಪ್ರತಿಷ್ಠಾಪನೆಗೂ ಮುನ್ನ ಸ್ಥಳ ಮಾಲೀಕರ ಅನುಮತಿ ಪತ್ರ ಕಡ್ಡಾಯ. ಸಂಘಟಕರು ತಾವು ಪ್ರತಿಷ್ಠಾಪಿಸಿರುವ ಮೂರ್ತಿಗಳ ಸುರಕ್ಷತೆ ಹಾಗೂ ಪ್ರತಿಷ್ಠಾಪನಾ ಸ್ಥಳದಲ್ಲಿ ನಡೆಯುವ ಯಾವುದೇ ಅಹಿತಕರ ಘಟನೆಗೆ ತಾವೇ ಜವಾಬ್ದಾರರಾಗಿರುತ್ತೀರಿ ಎನ್ನುವುದನ್ನು ಅರಿತು ಗಣೇಶೋತ್ಸವ ಆಚರಣೆ ಮಾಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಇಓ ಮುನಿರಾಜು, ಸರ್ಕಲ್ ಇನ್ಸ್ ಪೆಕ್ಟರ್ ನಂದಕುಮಾರ್, ಗ್ರಾಮಾಂತರ ಠಾಣೆ ಪಿಎಸ್ಸೈ ಸತೀಶ್, ಟೌನ್ ಪಿಎಸ್ಸೈ ಸುನಿಲ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version