![21Oct23Sd2b Sidlaghatta Government Hospital Facilities Inspection](https://www.sidlaghatta.com/wp-content/uploads/2023/10/21Oct23Sd2b.jpg)
Sidlaghatta : ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸುವಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ತೋರಿದ ನಿರ್ಲಕ್ಷ್ಯ ಸರಿಯಲ್ಲ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವಂತೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗೆ ಶಾಸಕ ಬಿ.ಎನ್.ರವಿಕುಮಾರ್ ಎಚ್ಚರಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಇತ್ತೀಚೆಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದೇ ದಿನ ಎರಡು ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರು ನಿರ್ಲಕ್ಷ್ಯವಹಿಸಿದ ಘಟನೆಯ ಬಗ್ಗೆ ತೀವ್ರ ಅಸಮಾದಾನ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು. ಕ್ಷೇತ್ರದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಕಲ್ಪಿಸಬೇಕು ಎನ್ನುವುದು ನನ್ನ ಆಶಯವಾಗಿದೆ. ಪ್ರತಿಯೊಬ್ಬರಿಗೂ ಸಕಾಲದಲ್ಲಿ ಉತ್ತಮ ಚಿಕಿತ್ಸೆ ಸಿಗುವಂತಾಗಬೇಕು ಎಂದರು.
ಆಸ್ಪತ್ರೆಯ ವಿವಿಧ ವಾರ್ಡ್‌ಗಳು, ಚುಚ್ಚು ಮದ್ದು ಕೊಠಡಿ, ಔಷಧಿ ವಿತರಣಾ ಕೊಠಡಿ, ಅಪರೇಷನ್ ಕೊಠಡಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ್‌ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜು ಹಾಜರಿದ್ದರು.