ಶಿಡ್ಲಘಟ್ಟ ನಗರದ ಆಜಾದ್‌ನಗರದಲ್ಲಿ ಬುಧವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಮಾತೃವಂದನಾ ಯೋಜನಾ ಸಪ್ತಾಹ ಹಾಗು ಪೋಷಣ್ ಮಾಸಾಚರಣೆ 2021-22 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಭಾರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಹೇಶ್ ಮಾತನಾಡಿದರು.
ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಕಿಶೋರಿಯರು ಸೇರಿದಂತೆ ಮಕ್ಕಳನ್ನು ಆರೋಗ್ಯವಂತರನ್ನಾಗಿ ರೂಪಿಸುವ ಉದ್ದೇಶದಿಂದ ಇಲಾಖೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸರ್ಕಾರ ಜಾರಿಗೆ ತಂದಿರುವ ಮಾತೃವಂದನಾ ಯೋಜನೆಯು ಬಾಣಂತಿಯರು ಸೇರಿದಂತೆ ಗರ್ಭಿಣಿಯರಿಗೆ ಸಹಕಾರಿಯಾಗಲಿದೆ. ಅರ್ಹ ಗರ್ಭಿಣಿ ಹಾಗು ಬಾಣಂತಿಯರಿಗೆ ಯೋಜನೆಯಡಿ ಮುರು ಹಂತದಲ್ಲಿ ೫ ಸಾವಿರ ನಗದು ಖಾತೆಗೆ ಜಮಾ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಬೆ ಉಪಾಧ್ಯಕ್ಷ ಅಪ್ಸರ್‌ಪಾಷ, ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭಾ, ಮುಖಂಡರಾದ ಎಸ್.ಎಂ.ರಮೇಶ್, ಬಾಬಾಜಾನ್, ಅಮೀರ್, ಪೋಷಣ್ ಅಭಿಯಾನದ ಸಿಬ್ಬಂದಿ ದೀಕ್ಷಾ, ರೋಜಾರಮಣಿ ಮತ್ತಿತರರು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi