ಶಿಡ್ಲಘಟ್ಟ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಯುತವಾಗಿ ನಡೆದಿದೆ.
ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನಲೆಯಲ್ಲಿ ಗ್ರಾಮೀಣ ಬಾಗದ ಜನತೆ ನಗರಕ್ಕೆ ಬಾರದೇ ಇದ್ದುದರಿಂದ ನಗರದ ಮುಖ್ಯ ರಸ್ತೆಗಳು ಸೇರಿದಂತೆ ಅಂಗಡಿ, ಮುಂಗಟ್ಟುಗಳಲ್ಲಿ ವ್ಯಾಪಾರವಿಲ್ಲದೇ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು.
ಬೆಳಿಗ್ಗೆ ಏಳು ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಕೆಲವೆಡೆ ಬೆಳಿಗ್ಗೆಯೇ ಉತ್ಸಾಹ ಭರಿತರಾಗಿ ಸರತಿಸಾಲುಗಳಲ್ಲಿ ನಿಂತು ಜನತೆ ಮತದಾನ ಮಾಡಿದರೆ, ಮತ್ತೆ ಕೆಲವೆಡೆ ಮತಗಟ್ಟೆಗಳಿಗೆ ಮಧ್ಯಾಹ್ನದ ವರೆಗೂ ಜನರು ಬರುವುದು ಕಡಿಮೆಯಾಗಿತ್ತು.
ಶಾಸಕ ವಿ.ಮುನಿಯಪ್ಪ ತಮ್ಮ ಸ್ವಗ್ರಾಮ ಹಂಡಿಗನಾಳ ಗ್ರಾಮದಲ್ಲಿ ಮತಚಲಾಯಿಸಿದರೆ, ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಸ್ವಗ್ರಾಮ ಮೇಲೂರಿನಲ್ಲಿ ಮತಚಲಾಯಿಸಿದರು.