Handiganala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ವೆಂಕಟಲಕ್ಷ್ಮಮ್ಮ ಹಾಗೂ ಉಪಾಧ್ಯಕ್ಷರಾಗಿ ಮಂಜುಳಮ್ಮ ಆಯ್ಕೆಯಾಗಿದ್ದಾರೆ.
ಒಟ್ಟು 15 ಸದಸ್ಯ ಬಲ ಹೊಂದಿರುವ ಹಂಡಿಗನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮರನಾರಾಯಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ತಾ.ಪಂ ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರೆಡ್ಡಿ, ಸದಸ್ಯರಾದ ಜಯರಾಮ್, ದ್ಯಾವಪ್ಪ, ಗಂಗರತ್ನ, ಸುದೀಪ್, ಮಂಜುಳಮ್ಮ, ವೆಂಕಟರತ್ನಮ್ಮ, ನಾರಾಯಣಪ್ಪ, ಮಂಜುಳಮ್ಮ, ಆರ್.ಮುನಿಯಪ್ಪ, ಗೀತಮ್ಮ, ನಾಗರಾಜ್ ಪಿಡಿಓ ಕೆ.ಎಸ್.ಮಧು, ಕಾರ್ಯದರ್ಶಿ ಶ್ರೀನಿವಾಸ್ ಹಾಜರಿದ್ದರು.