ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಹಂಡಿಗನಾಳ ಗ್ರಾಮ ಪಂಚಾಯಿತಿ ಇದೇ ಮೊಟ್ಟ ಮೊದಲ ಬಾರಿಗೆ ಜೆಡಿಎಸ್ ಪಾಲಾಗಿದ್ದು ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಮುನಿರೆಡ್ಡಿ ಉಪಾಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಮುನಿಯಪ್ಪ ಅವರ ಹುಟ್ಟೂರು ಹಂಡಿಗನಾಳ ಗ್ರಾಮ ಪಂಚಾಯಿತಿ ಈವರೆಗೂ ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿತ್ತು. ಆದರೆ ಇದೇ ಮೊಟ್ಟ ಮೊದಲ ಬಾರಿಗೆ 15 ಸದಸ್ಯ ಬಲ ಹೊಂದಿರುವ ಹಂಡಿಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಮಂದಿ ಜೆಡಿಎಸ್ ಬೆಂಬಲಿತರು ಜಯಶೀಲರಾಗಿದ್ದು ವರದನಾಯಕನಹಳ್ಳಿಯ ಮುನಿರೆಡ್ಡಿ ಅಧ್ಯಕ್ಷರಾಗಿ ಆಯ್ಕೆಯಾದರೆ ಉಪಾಧ್ಯಕ್ಷೆಯಾಗಿ ಹನುಮಂತಪುರದ ವೆಂಕಟಲಕ್ಷ್ಮಮ್ಮ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿ ನಿಗಧಿಪಡಿಸಲಾಗಿತ್ತು.