ಶಿಡ್ಲಘಟ್ಟ ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮಧ್ಯ ತಯಾರಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಸಿಬ್ಬಂದಿ ಸುಮಾರು 10 ಲಕ್ಷ ಬೆಲೆ ಬಾಳುವ ನಕಲಿ ಮಧ್ಯ, ಮಧ್ಯಸಾರ ಹಾಗು ಬಾಟಲಿ, ಮುಚ್ಚಳಗಳನ್ನು ವಶಪಡಿಸಿಕೊಂಡಿರುವ ಜೊತೆಗೆ ಆರೋಪಿ ಟಿ.ಎಂ.ಮಂಜುನಾಥ್ ನನ್ನು ಬಂದಿಸಿದ್ದಾರೆ.
ಅಬಕಾರಿ ಉಪ ಆಯುಕ್ತ ಜಿ.ಪಿ.ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆ ಸಿಬ್ಬಂದಿ ಭಾನುವಾರ ಮುಂಜಾನೆ ನಕಲಿ ಮಧ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ೧೨೯೦ ಲೀ ಸ್ಪಿರಿಟ್ ಸೇರಿದಂತೆ ೬೨ ಲೀ ಬ್ಲೆಂಡ್, ೩೨ ಕೆಜಿ ಯಷ್ಟು ಕ್ಯಾಪ್, ಲೇಬಲ್ ಹಾಗು ತಯಾರಿಸಿಟ್ಟಿದ್ದ ೩೭.೮೦೦ ಲೀ ನಷ್ಟು ನಕಲಿ ಮಧ್ಯ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇನ್ಸ್‌ಪೆಕ್ಟರ್ ವಿಶ್ವನಾಥಬಾಬು, ಫಿರೋಜ್‌ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳ, ಸಿಬ್ಬಂದಿಗಳಾದ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಮತ್ತಿತರರು ಹಾಜರಿದ್ದರು.