Sidlaghatta : ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲಗಟ್ಟು ಬಲಗೊಳಿಸಲು ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಬೇಕು ಎಂದು ತಾ.ಪಂ ಇಓ ಹಾಗೂ ಸ್ವೀಪ್ ಸಮಿತಿಯ ಅದ್ಯಕ್ಷ ಜಿ.ಮುನಿರಾಜ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಡ್ಲಘಟ್ಟ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಸ್ವೀಪ್ ಕಮಿಟಿ ಶಿಡ್ಲಘಟ್ಟ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
18 ವರ್ಷ ತುಂಬಿರುವ ಹಾಗು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿರುವ ಪ್ರತಿಯೊಬ್ಬರು ಮುಂದಿನ ತಿಂಗಳು ಮೇ ಹತ್ತರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು. ತಮ್ಮ ತಮ್ಮ ಮನೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಮತದಾನದ ಹಕ್ಕು ಇಲ್ಲದಿದ್ದರೂ ತಮ್ಮ ತಮ್ಮ ಮನೆಗಳಲ್ಲಿ ಮತ್ತು ಸುತ್ತಮುತ್ತಲಿನ ಜನರಲ್ಲಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರೇರಣೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳು ಮತ್ತು ಸೇವಾ ಕಾರ್ಯಗಳಿಗೆ ಸದಾ ಮುಂದಿದ್ದು, ಅದರಂತೆ ಈಗ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ತಮ್ಮ ಮನೆಗಳಲ್ಲಿ ಹಾಗೂ ತಮ್ಮ ಬಡಾವಣೆಗಳಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತದಾನವನ್ನು ಮಾಡಿ ಪ್ರಜಾಪ್ರಭುತ್ವವನ್ನು ಉಳಿಸಲು ಹಾಗೂ ರಾಷ್ಟ್ರದ ಪ್ರಗತಿಗೆ ಸಹಕಾರಿಯಾಗಲು ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಬಿ.ಸಿ.ಮುನಿರಾಜು, ಸಹಕಾರ್ಯದರ್ಶಿ ನಾಗರಾಜು, ಶಿಕ್ಷಕರಾದ ನಾರಾಯಣಸ್ವಾಮಿ, ಸುಶೀಲಮ್ಮ, ಉಷಾ, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ರೋವರ್‌ಗಳು ಹಾಜರಿದ್ದರು.
Voting awareness jatha by Bharat Scouts and Guides Sidlaghatta
Sidlaghatta : G. Muniraja, President of T.P.M.EO and Sweep Committee, emphasized the importance of voting to strengthen the foundation of the country’s democratic system. He made this statement during the voting awareness jatha program held in the city on Saturday, organized by the Bharat Scouts and Guides Sidlaghatta organization and taluk administration, Taluk Panchayat Sweep Committee Sidlaghatta.
Muniraja urged everyone who has completed 18 years of age and registered in the electoral roll to participate in the upcoming assembly elections to be held on May 10. He also stressed the need to create awareness about voting among voters in their respective homes and surrounding areas.
District Education Officer Narendra Kumar encouraged students to vote compulsorily in their homes and among people around them, even though they are not eligible to vote.
Bharat Scouts and Guides District Secretary C.B. Prakash mentioned that eligible voters must vote and spread awareness at their homes and community to save democracy and contribute to the progress of the nation. He emphasized the importance of making people aware of the voting process.
The event was attended by various individuals, including Bharat Scouts and Guides Local Organization Secretary BC Muniraju, Co-ordinator Nagaraju, teachers Narayanaswamy, Sushilamma, Usha, various school students, and Rovers.