ಕೊರೊನಾ ಎಂಬ ಖಾಯಿಲೆ ಮನುಕುಲಕ್ಕೆ ದೊಡ್ಡ ಪಾಠ ಕಲಿಸಿದೆ. ಮಾನಸಿಕ ಶಕ್ತಿಯನ್ನು ಒಗ್ಗೂಡಿಸಿಕೊಂಡು, ಸರಳತೆಯನ್ನು ಮೈಗೂಡಿಸಿಕೊಂಡು, ಒಗ್ಗಟ್ಟಿನಿಂದ ಬದುಕಬೇಕು ಮತ್ತು ಸಮಾಜವನ್ನು ಕಟ್ಟಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 74 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಆರ್ಥಿಕ ಪರಿಸ್ಥಿತಿ ಈಗ ಹದಗೆಟ್ಟಿದ್ದು, ಎಲ್ಲರೂ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು. ಕಷ್ಟದಲ್ಲಿರುವವರಿಗೆ ನೆರವಾಗಬೇಕು. ಇದುವೇ ಸ್ವಾತಂತ್ರ್ಯ ದಿನಾಚರಣೆಯ ನಿಜವಾದ ಅರ್ಥ ಎಂದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರು, ಕೊರೊನಾ ವಾರಿಯರ್ ಗಳಾಗಿ ದುಡಿದ ಆರೋಗ್ಯ ಇಲಾಖೆ ಸಿಬ್ಬಂದಿ, ನಗರಸಭೆ, ಪೊಲೀಸ್, ಶಿಕ್ಷಣ, ಕಂದಾಯ ಇಲಾಖೆಗಳ ಸಿಬ್ಬಂದಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕೊರೊನಾ ರೋಗದಿಂದ ಗುಣಮುಖರಾದವರು, ಯೋಧರು, ನರೇಗಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ತಹಶಿಲ್ದಾರ್ ಕೆ.ಅರುಂಧತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಸದಸ್ಯೆ ಪಂಕಜಾ ನಿರಂಜನ್, ಇಒ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಆಡಳಿತ ವೈದ್ಯಾಧಿಕಾರಿ ಡಾ.ವಾಣಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಸಿಡಿಪಿಒ ನಾಗಮಣಿ, ಆರ್.ಐ ಪ್ರಶಾಂತ್, ನಗರಸಭಾ ಸದಸ್ಯರಾದ ಅನಿಲ್ ಕುಮಾರ್, ಮುನಿರಾಜು ಹಾಜರಿದ್ದರು.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi