ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಯ: ವಸತಿ ಶಾಲೆ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

Indira Gandhi Residential School girls badminton team, Chikkaballapur district-level winners, with coach

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಗೇಪಲ್ಲಿ ತಾಲ್ಲೂಕಿನ ತಂಡವನ್ನು ಸೋಲಿಸಿ, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಸ್ಪರ್ಧೆಯ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ಜಯಗಳಿಸಿದ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ಯಾರು ವಿಭಾಗ ಮಟ್ಟಕ್ಕೆ ಆಯ್ಕೆಯಾದರು?

ವಿಜೇತ ವಿದ್ಯಾರ್ಥಿನಿಯರಾದ ಪ್ರಾರ್ಥನಾ.ಜಿ.ಎಂ, ಮಹೇಶ್ವರಿ ಹೆಚ್.ಡಿ, ಪಲ್ಲವಿ.ಎಲ್, ನಿಶಾ.ಎಂ ಹಾಗೂ ಶೃತಿ ಅವರನ್ನು ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ವಿದ್ಯಾರ್ಥಿನಿಯರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ತಿಳಿಸಿದ್ದಾರೆ.

ಇದೇ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಗೆದ್ದ ಕುರಿತು ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ: ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ ವರದಿಯನ್ನು, ಜಿಲ್ಲಾ ಮಟ್ಟದ ಮತ್ತೊಂದು ಸಾಧನೆಯ ಕುರಿತು ಜಿಲ್ಲಾ ಮಟ್ಟದ ವಾಲಿಬಾಲ್‌ನಲ್ಲಿ ಡಾಲ್ಫಿನ್ಸ್ ಕಾಲೇಜು ಚಾಂಪಿಯನ್: ರಾಜ್ಯಮಟ್ಟಕ್ಕೆ ಅರ್ಹತೆ ವರದಿಯನ್ನೂ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Share
error: Content is protected !!