Sidlaghatta : ಯುವಜನರು ಕ್ಷಣಿಕ ಸುಖಕ್ಕಾಗಿ ಸೇವಿಸುವ ಮಾದಕ ವಸ್ತುಗಳುಆರೋಗ್ಯ ಹಾಳು ಮಾಡುವ ಜೊತೆಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತವೆ. ಆದ್ದರಿಂದ ಯಾರೂ ಕೂಡ ಮಾದಕ ವಸ್ತುಗಳ ಸೇವನೆಯ ಹಿಂದೆ ಬೀಳಬಾರದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಯುವ ಶಕ್ತಿ ಹಲವು ರೀತಿಯ ಆಕರ್ಷಣೆಗಳಿಂದ ಮಾದಕ ವಸ್ತುಗಳ ಸೇವನೆಯ ದುಶ್ಚಟಕ್ಕೆ ಬಲಿಯಾಗುತ್ತಿರುವುದು ತುಂಬಾ ವಿಷಾದನೀಯ. ಇದು ಜೀವಕ್ಕೆ ಹಾನಿ ಉಂಟು ಮಾಡುವುದರ ಜೊತೆಗೆ, ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತದೆ. ಇವುಗಳ ಸೇವನೆ, ಸಾಗಣೆ, ಮಾರಾಟ ಮಾಡುವುದು ಅಪರಾಧವಾಗಿದ್ದು, ಅದರ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ನಿಷೇಧಕ್ಕೆ ಕೇವಲ ಕಾಯ್ದೆ-ಕಾನೂನುಗಳ ಮೂಲಕ ಮಾತ್ರ ಸಾಧ್ಯವಾಗದೆ, ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್, ಡಾ. ಪ್ರಮೋದ್ , ಡಾ. ವಿಜಯ್, ಡಾ. ಭರತ್, ಡಾ. ರಾಘವೇಂದ್ರ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಲೋಕೇಶ್, ತಾಲ್ಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಮುನಿರತ್ನಮ್ಮ, ಪ್ರಯೋಗಶಾಲಾ ನೋಡಲ್ ಅಧಿಕಾರಿ ನರಸಿಂಹಪ್ಪ, ನಂದಿನಿ, ಗೀತಾ, ಅಫ್ರೋಜ್, ನರಸಿಂಹಮೂರ್ತಿ, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು