Sidlaghatta : ಶಿಡ್ಲಘಟ್ಟದಲ್ಲಿ ಮುಂದಿನ ಜೂನ್ 9 ರಂದು ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ನಡೆಸಲು ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಧಾರ್ಮಿಕ ಮುಖಂಡರು ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ, ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಶ್ರೀರಾಮ ಶೋಭಾಯಾತ್ರೆಯನ್ನು ಜೂನ್ 9 ರಂದು ಎಲ್ಲರ ಸಹಕಾರದಿಂದ ನಡೆಸಲು ಸಭೆಯಲ್ಲಿ ಒಮ್ಮತದ ತೀರ್ಮಾನವನ್ನು ಕೈಗೊಳ್ಳಲಾಯಿತು.
ಶೋಭಾಯಾತ್ರೆಯು ಯಶಸ್ವಿಯಾಗಿಸಲು ಇನ್ನೂ ಹಲವು ಭಾರಿ ಸಭೆಗಳನ್ನು ನಡೆಸಬೇಕು, ಚರ್ಚಿಸಬೇಕು, ಅದಕ್ಕಾಗಿ ಎಲ್ಲ ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಸಭೆಯಲ್ಲಿದ್ದ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಧಾರ್ಮಿಕ ಮುಖಂಡರು, ನಾನಾ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.