ತಾಲ್ಲೂಕಿನ ಬೊಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿ.ಎಂ.ದೇವರಾಜ್ ಹಾಗೂ ಉಪಾಧ್ಯಕ್ಷರಾಗಿ ಎಂ.ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಎಸ್.ಭಾಸ್ಕರ್ ತಿಳಿಸಿದ್ದಾರೆ.
ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆವಲಪ್ಪ, ಬಿ.ಜಿ.ಆನಂದ್, ವಿ.ಆಂಜಿನೇಯರೆಡ್ಡಿ, ಬಿ.ಎಂ.ರಮೇಶ್, ಬಿ.ಎನ್.ಚನ್ನಕೃಷ್ಣಪ್ಪ, ಬಿ.ಎಂ.ನಾರಾಯಣಸ್ವಾಮಿ, ಬಿ.ವಿ.ಶ್ರೀನಿವಾಸಮೂರ್ತಿ, ಕೆ.ಮುನಿಶಾಮಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.