Home News ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿ

0

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಳೆ ನೀರು ಸಂರಕ್ಷಣೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿರುವ ಕಾಮಗಾರಿಗಳನ್ನು ನಡೆಸಿರುವುದಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್ ಮೆಚ್ಚುಗೆ ವ್ಯಕ್ತಪಡಿಸಿದರು.

 ಉದ್ಯೋಗಖಾತ್ರಿ ಯೋಜನೆಯಡಿ ತಾಲ್ಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಹೇಮಾರ‍್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಿಸಿರುವ ಗ್ರಾಮೀಣ ಉದ್ಯಾನವನ ಹಾಗೂ ಹಾರಡಿ ಗ್ರಾಮದಲ್ಲಿ ನಿರ್ಮಿಸುತ್ತಿರುವ ಕುಂಟೆ ಕಾಮಗಾರಿಯನ್ನು ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

 ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ವೃದ್ಧಿಗೊಳಿಸಲು ಮತ್ತು ಅಂರ್ತಜಲಮಟ್ಟ ವೃದ್ಧಿಗೊಳಿಸುವ ಕಾಮಗಾರಿಗಳನ್ನು ನಡೆಸಲಾಗಿದೆ. ಇದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಂಥಾಲಯಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿ ಜ್ಞಾನರ್ಜನೆ ಕೇಂದ್ರಗಳಾಗಿ ಪರಿವರ್ತಿಸಬೇಕೆಂದು ಸೂಚಿಸಿದರು.

 ತಾಲ್ಲೂಕಿನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ. ಕೊರೊನಾ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳಿಂದ ಹೆಚ್ಚಿನ ಅನುಕೂಲ ಕಲ್ಪಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕೆಂದರು.

 ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ 38 ಸರ್ಕಾರಿ ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಶಾಲೆಗಿಂತಲೂ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಚೆನ್ನಾಗಿ ಅಭಿವೃದ್ಧಿಗೊಳಿಸಲಾಗಿದೆ ಎಂದರು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ನೈನಾ ನಿಖತ್ ಆರಾ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

 


 
Uma Mahadevan, IAS,. Principal Secretary, Rural Development & Panchayat Raj, commended the rain water conservation and educational development works completed under Mahatma Gandhi National Rural Employment Guarantee Scheme in Sidlaghatta Taluk.
She spoke on Monday to media about the rural park built in the premises of the Hemarlahalli Primary Health Center of the Kumbiganahalli Gram Panchayat in Haradi village of Sidalghatta Taluk under the Udyoga Khatri scheme.
Principal Secretary said infrastructural projects have been carried out In rural areas and suggested that libraries at Gram Panchayat level should be developed in high tech mode and converted into knowledge centers.
In order to combat coronavirus pandemic Secretary suggested to government’s guidelines should be widely publicized in order to raise awareness among people and  control of the virus should be facilitated by help of centers starting at the village panchayat level.
Chikkaballapur District Zilla Panchayat CEO Fauzia Tarunnum spoke on the occasion and said “The government has taken steps to develop 38 government high schools and Anganwadi centers in the district. Government schools and Anganwadi centers are better developed than private schools.”
Zilla Panchayat Planning Director Girija Shankar, Sidlaghatta Taluk Panchayat EO B. Shivakumar, MNREGA Project Assistant Director Chandrappa and Kumbiganahalli Village Panchayat PDO Naina Nikhat Ara were also present on the occasion.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi