ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಪ್ಪಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು 2020-2021ನೇ ಸಾಲಿನ ಸರ್ವಸದಸ್ಯರ ಸಭೆಯಲ್ಲಿ ಕೋಚಿಮುಲ್ (KOCHIMUL) ನಿರ್ದೇಶಕ ಆರ್.ಶ್ರೀನಿವಾಸ್ ಮಾತನಾಡಿದರು.
ಹಾಲಿನ ಗುಣಮಟ್ಟ ಹೆಚ್ಚಿಸುವ ಜವಾಬ್ದಾರಿ ರೈತರಾಗಿದೆ. ಹಾಲು ಉತ್ಪಾದಕರು ಡೈರಿಗಳಿಗೆ ಹಾಕುವ ಹಾಲಿನ ಗುಣಮಟ್ಟ ಹಾಲಿನ ಗುಣಮಟ್ಟ ಇದ್ದಲ್ಲಿ, ಉತ್ಪಾದಕರಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಅವರು ತಿಳಿಸಿದರು.
ಪಕ್ಕದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ, ಹೊಸಕೋಟೆ ಹಾಲು ಒಕ್ಕೂಟದಲ್ಲಿ ಹಾಲು ಉತ್ಪಾದನೆಯಲ್ಲಿ ಶೇ 90 ರಷ್ಟು ಗುಣಮಟ್ಟ ಇದೆ. ನಮ್ಮ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಉತ್ಪಾದಿಸುವ ಹಾಲಿನ ಗುಣ ಮಟ್ಟದಲ್ಲಿ ಸುಧಾರಣೆಯಾಗಬೇಕಿದೆ. ಸಹಕಾರ ಸಂಘಗಳಲ್ಲಿ ಉತ್ತಮ ಗುಣಮಟ್ಟದ ಹಾಲು ಶೇಖರಣೆಯಾದಾಗ ಹಾಲಿಗೆ ತಕ್ಕ ಬೆಲೆ ಸಿಗುವ ಮೂಲಕ ಸಹಕಾರ ಸಂಘವನ್ನು ಮುಂದುವರಿಸಿಕೊಂಡು ಹೋಗಬಹುದು. ಆಗ ಹಾಲಿನ ಉತ್ಪಾದಕನಿಗೂ ಆರ್ಥಿಕವಾಗಿ ಸಹಾಯವಾಗುತ್ತದೆ ಎಂದರು.
ರಾಪಾರ್ಲ ಹಳ್ಳಿ ಡೈರಿ ಅಧ್ಯಕ್ಷ ಜಿ.ಟಿ.ನಾರಾಯಣಸ್ವಾಮಿ, ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮಾಜಿ ಅಧ್ಯಕ್ಷ
ಕೆ. ಗುಡಿಯಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜು, ಕೋಚಿಮುಲ್ ವ್ಯವಸ್ಥಾಪಕ ಕೆಂಪರಾಜು, ವಿಸ್ತರಣಾ ಅಧಿಕಾರಿ ಶ್ರೀನಿವಾಸ್ ಹಾಜರಿದ್ದರು.