ತಾಲ್ಲೂಕಿನಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಸಿಡಿಲು ಬಡಿದು ಮೃತಪಟ್ಟಿದ್ದರು.
ಸ್ಥಳಕ್ಕೆ ತಹಶೀಲ್ದಾರ್ ರಾಜೀವ್ ಅವರು ಭೇಟಿ ನೀಡಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ವರದಿ ಆಧಾರದ ಮೇರೆಗೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂಗಳ ಪರಿಹಾರದ ಚೆಕ್ ಅನ್ನು ಮೃತರ ಪತಿ ವೆಂಕಟರವಣಪ್ಪ ಮತ್ತು ಮಗ ಮುನಿಕೃಷ್ಣ ಅವರಿಗೆ ಶಾಸಕ ವಿ.ಮುನಿಯಪ್ಪ ಅವರು ಶುಕ್ರವಾರ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೀವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಪಿ.ಮುನಿರೆಡ್ಡಿ, ನಗರಸಭೆ ಸದಸ್ಯ ಅನಿಲ್ ಕುಮಾರ್, ನಗರಸಭೆ ಆಯುಕ್ತ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಯುವ ಮುಖಂಡ ಚರಣ್ ರೆಡ್ಡಿ, ತಿರಪಿಳ್ಳಪ್ಪ ಹಾಜರಿದ್ದರು.