Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಚರ್ಮಗಂಟು ರೋಗ ತಡೆಗಟ್ಟುವಿಕೆಗೆ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆ ಹೆಬ್ಬಾಳದ ವಿಜ್ಞಾನಿಗಳ ತಂಡ ಮತ್ತು ಪಶುಪಾಲನಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಜೊತೆ ಸೇರಿ ಲಸಿಕ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ವಿಜ್ಞಾನಿಗಳ ತಂಡ ಮತ್ತು ರೈತರ ನಡುವೆ, ಲಸಿಕೆ ಮಹತ್ವ, ಪ್ರಾಣಿ ಆರೋಗ್ಯ, ಪಶುಪಾಲನ ಚಟುವಟಿಕೆ, ಲಾಭದಾಯಕ ಹೈನುಗಾರಿಕೆ, ಇನ್ನಿತರ ವಿಷಯಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆ ಹೆಬ್ಬಾಳದ ನಿರ್ದೇಶಕ ಡಾ. ವೆಂಕಟೇಶ್ ರವರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರಿಗೆ ಪಶು ಪಾಲನಾ ಇಲಾಖೆ ತಾಲ್ಲೂಕು ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಕೆ.ರಮೇಶ್, ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಗ್ರಾಮದ ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.