Sidlaghatta : ನಗರದ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ (Maharshi Valmiki Jayanti) ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ (V Muniyappa) ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಶ್ರೀರಾಮಾಯಣವು ಸಾರ್ವಕಾಲಿಕವಾದುದು. ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿವೆ. ಈ ಮಹಾಕಾವ್ಯ ಜಗತ್ತಿನಲ್ಲಿ ಇಂದಿಗೂ ಮಾನವೀಯತೆ, ಧರ್ಮ ಸಂಸ್ಕಾರ ನೆಲೆಸಲು ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿಯನ್ನು ಬೋಧಿಸಿದ್ದಾರೆ ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಭಾರತದ ಭವ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮಾಯಣದಂತಹ ಮೇರುಕೃತಿಯನ್ನು ರಚಿಸಿದ ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ. ರಾಮಾಯಣದ ಮೂಲಕ ರಾಜಧರ್ಮ, ನೀತಿಶಾಸ್ತ್ರವನ್ನು ಜಗತ್ತಿಗೆ ಬೋಧಿಸಿದ ವಾಲ್ಮೀಕಿ ಮಹರ್ಷಿಯು ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದು ಬಣ್ಣಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್, ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ ಬಂಕ್ ಮುನಿಯಪ್ಪ, ಸಮುದಾಯದ ಮುಖಂಡರಾದ ಎನ್.ಮುನಿಯಪ್ಪ, ರಾಮಚಂದ್ರಪ್ಪ, ಇಒ ಮುನಿರಾಜು, ಆಯುಕ್ತ ಶ್ರೀಕಾಂತ್, ಸುಬ್ಬಾರೆಡ್ಡಿ ಹಾಜರಿದ್ದರು.
ಮೇಲೂರಿನಲ್ಲಿ ವಾಲ್ಮೀಕಿ ಜಯಂತಿ :
ಶಿಡ್ಲಘಟ್ಟ ತಾಲ್ಲೂಕು ಮೇಲೂರು ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ವಾಲ್ಮೀಕಿಜಯಂತಿಯನ್ನು ಆಚರಿಸಲಾಯಿತು.
ಹಿರಿಯ ಕಲಾವಿದ ಎಂ.ಎಂ. ಸ್ವಾಮಿಯವರು ಮಾತನಾಡುತ್ತಾ, “ಆದಿಕವಿ ಮಹರ್ಷಿ ವಾಲ್ಮೀಕಿಯು ರಾಮಾಯಣವನ್ನು ರಚಿಸಿ ಎಲ್ಲರಿಗೂ ಸನ್ಮಾರ್ಗವನ್ನು ತೋರಿಸಿದರು. ಪವಿತ್ರ ಪುಸ್ತಕ ರಾಮಾಯಣದಲ್ಲಿ ಪ್ರೀತಿ, ತ್ಯಾಗ, ದೃಢತೆ ಮತ್ತು ಸಮಾನತೆಯ ಭಾವನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಲೂರು ವಾಲ್ಮೀಕಿ ಸಂಘದ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಪಿಡಿಒ ಶಾರದಾ, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಶಿವಕುಮಾರ್, ಗಜೇಂದ್ರ, ದೇವರಾಜ, ಗೋಪಾಲರೆಡ್ಡಿ, ರೂಪೇಶ್, ಶಿವಣ್ಣ, ಶ್ರೀನಿವಾಸಮೂರ್ತಿ, ಎಂ.ಎನ್.ಮೂರ್ತಿ, ನಾರಾಯಣಸ್ವಾಮಿ, ತಿರುಮಲೇಶ್, ಧರ್ಮೆಂದ್ರ. ಎಂ.ಜೆ. ಪ್ರಭಾಕರ್, ಎಸ್.ಆರ್. ವೆಂಕಟೇಶ್, ಮುನಿರಾಜ, ಶ್ರೀನಿವಾಸ್, ಗ್ರಾಮಪಂಚಾಯಿತಿ ಸಿಬ್ಬಂದಿ, ಗ್ರಾಮಸ್ಥರು ಹಾಜರಿದ್ದರು. ಎಲ್ಲರಿಗೂ ಸಿಹಿ ಮತ್ತು ಲಘು ಉಪಹಾರವನ್ನು ಕೊಡಲಾಯಿತು.