News

ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Malamachanahalli Gram Panchayat President Vice-President Election

Malamachanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ವಿಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷೆಯಾಗಿ ಜಯಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ನಾಗವೇಣಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ಸ್ಥಾನಕ್ಕೆ ಜಯಮ್ಮ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆಯಾಗಿದ್ದಾರೆ.

ಚುನಾವಣಾಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ಅವರು ಕಾರ್ಯನಿರ್ವಹಿಸಿದರು. ಪಿಡಿಒ ಶೈಲಜ, ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಹಾಜರಿದ್ದರು. ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವರನ್ನು ಅಭಿನಂದಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Share
error: Content is protected !!