ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮುತ್ತೂರು ಬೈರೇಗೌಡ ಅವಿರೋಧವಾಗಿ ಆಯ್ಕೆಯಾದರು. ಮಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಸೂರ್ಯನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮುತ್ತೂರು ಬೈರೇಗೌಡ ಅವರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾಕಾರಿಯಾಗಿ ಕಾರ್ಯನಿರ್ವಹಿಸಿದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ್ ಅವರು, ಬೈರೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬೈರೇಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಅವರ ಮನೆಗೆ ತೆರಳಿ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ್ದಕ್ಕೆ ಅಬಿನಂಧನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಜೆಡಿಎಸ್ ಮುಖಂಡ ಬಿ.ಎನ್.ಸಚಿನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪವಿತ್ರ ದೇವರಾಜ್, ಸದಸ್ಯೆ ಮಮತಾ, ಮುನಿಶಾಮಪ್ಪ, ಮುನಿರತ್ನಮ್ಮ, ಸತೀಶ್, ಶ್ರೀಧರ್, ಮಾಜಿ ಸದಸ್ಯ ಎಂ.ಟಿ.ಕೆಂಪೇಗೌಡ, ರಮೇಶ್, ಎಂ.ಎಸ್.ಮಂಜುನಾಥ್, ತಾದೂರು ರಘು ಹಾಜರಿದ್ದರು.