Home News ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ

ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ

0
Melur bjp Blood Donation Camp

Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಭಾನುವಾರ ಚಂದ್ರಶೇಖರ್‌ ಆಜಾದ್ ಸ್ಮರಣಾರ್ಥ BJP ಗ್ರಾಮಾಂತರ ಮಂಡಲ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರದ (Blood Donation camp) ನೇತೃತ್ವ ವಹಿಸಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಅವರು ಮಾತನಾಡಿದರು.

ವೈಜ್ಞಾನಿಕವಾಗಿ ನಾವೆಷ್ಟೇ ಪ್ರಗತಿ ಸಾಧಿಸಿದರೂ ರಕ್ತವನ್ನು ಕೃತಕವಾಗಿ ತಯಾರಿಸಲು ಅಥವ ಹಣದಿಂದ ಖರೀದಿಸಲು ಆಗುವುದಿಲ್ಲ. ಹೆಣ್ಣುಮಕ್ಕಳ ಪ್ರಸವ ಸೇರಿದಂತೆ ಅಪಘಾತಗಳ ಸಂದರ್ಭದಲ್ಲಿ ರಕ್ತದ ಅಗತ್ಯವಿರುತ್ತದೆ. ಆದ ಕಾರಣ ಆರೋಗ್ಯವಂತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಭಾಗಿಯಾಗಬೇಕು. 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದನ್ನು ರೂಡಿಸಿಕೊಳ್ಳಬೇಕು ಎಂದರು.

ರಕ್ತದಾನ ಶಿಬಿರದಲ್ಲಿ 146 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವರಾಜ್, ತಾಲ್ಲೂಕು ಉಪಾಧ್ಯಕ್ಷ ಅರಿಕೆರೆ ಮುನಿರಾಜು, ಯುವಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್, ಪ್ರದಾನ ಕಾರ್ಯದರ್ಶಿ ರಣಜಿತ್‌ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾರೆಡ್ಡಿ, ರೈತ ಮೋರ್ಚಾ ಅಧ್ಯಕ್ಷ ಬೈರಾರೆಡ್ಡಿ, ಪ್ರದಾನ ಕಾರ್ಯದರ್ಶಿ ನಟರಾಜ್, ಖಜಾಂಚಿ ರವಿಚಾರಿ, ಪದಾಧಿಕಾರಿಗಳಾದ ಅಬ್ಲೂಡು ಜಯಸಿಂಹ, ಗುಡಿಹಳ್ಳ ಮಂಜುನಾಥ್, ಮೇಲೂರು ಅನಿಲ್‌ಕುಮಾರ್, ಹೇಮಾವತಿ, ಭಾಗ್ಯಲಕ್ಷ್ಮಮ್ಮ, ನಾರಾಯಣಸ್ವಾಮಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version