Home News ಮೇಲೂರಿನ ಪುರಾಣಪ್ರಸಿದ್ಧ ಗಂಗಾದೇವಿಯ ಬ್ರಹ್ಮರಥೋತ್ಸವ

ಮೇಲೂರಿನ ಪುರಾಣಪ್ರಸಿದ್ಧ ಗಂಗಾದೇವಿಯ ಬ್ರಹ್ಮರಥೋತ್ಸವ

0
Sidlaghatta Melur Gangadevi Brahmarathotsava

ಪುರಾಣ ಪ್ರಸಿದ್ದ ಶ್ರೀ ಗಂಗಾದೇವಿಯ ಬ್ರಹ್ಮರಥೋತ್ಸವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶನಿವಾರ ಅದ್ದೂರಿಯಾಗಿ ನೆರವೇರಿತು. ಗ್ರಾಮದ ಮುಖಂಡರುಗಳು ಹಾಗೂ ಯುವಕರು ರಥೋತ್ಸವಕ್ಕೆ ಚಾಲನೆ ನೀಡಿದರು.

ತಾಲ್ಲೂಕಿನ ಪುರಾಣ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಮೇಲೂರಿನ ಶ್ರೀ ಗಂಗಾದೇವಿಯ ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯವನ್ನು ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿತ್ತು, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು, ವಿವಿಧ ಜಾನಪದ ಕಲಾತಂಡಗಳು, ತಮಟೆಗಳ ವಾದನ, ಗಾರುಡಿ ಬೊಂಬೆಗಳ ನರ್ತನಗಳು ನೋಡುಗರ ಕಣ್ಮನ ಸೆಳೆಯುತ್ತಿದ್ದವು.

ಬ್ರಹ್ಮರಥೋತ್ಸವದ ಅಂಗವಾಗಿ ಹೋಮಕುಂಡವನ್ನು ಸ್ಥಾಪನೆ ಮಾಡಿ, ಲೋಕ ಕಲ್ಯಾಣಾರ್ಥವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು, ಗಂಗಾದೇವಿಗೆ ವಿಶೇಷ ಹೂವಿನ ಅಲಂಕಾರಗಳೊಂದಿಗೆ ಪೂಜೆಗಳನ್ನು ಸಮರ್ಪಣೆ ಮಾಡಲಾಯಿತು, ನೆರೆದಿದ್ದ ಭಕ್ತಾದಿಗಳು ರಥಕ್ಕೆ ದವನದೊಂದಿಗಿನ ಬಾಳೇ ಹಣ್ಣು ಎಸೆಯುವುದರ ಮೂಲಕ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು, ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳಿಗೆ ಕೋಸಂಬರಿ ಪಾನಕಗಳನ್ನು ವಿತರಿಸಲಾಯಿತು. ದೇವಾಲಯದಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಶಿರಸ್ತೆದಾರ್ ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಶಿವಕುಮಾರ್, ಸವಿತಾ ಗೋಪಾಲರೆಡ್ಡಿ, ಗ್ರಾಮದ ಸುದರ್ಶನ್, ಧರ್ಮೇಂದ್ರ, ಸುಧೀರ್, ಶ್ರೀನಿವಾಸಮೂರ್ತಿ(ಪುಲಿ), ಕೆ.ಎನ್.ಬಚ್ಚೇಗೌಡ, ರಾಮಕೃಷ್ಣಪ್ಪ, ಜೇಜೇಗೌಡ, ಅಶ್ವಥ್ಥಪ್ಪ, ಮುನಿಶಾಮಪ್ಪ ಮತ್ತು ದೇವಾಲಯದ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಯುವಕರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version