Melur, Sidlaghatta : ಶಿಡ್ಲಘಟ್ಟ ತಾಲ್ಲೂಕು ಮೇಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನವೀಕರಣ ಗೊಂಡ ಹಾಲು ಉತ್ಪಾದಕರ ಸಹಕಾರ ಸಂಘ ಕಟ್ಟಡ ಹಾಗೂ KOCHIMUL ಡೇರಿ ವೆಲ್ ಫೇರ್ ಟ್ರಸ್ಟ್ ವತಿಯಿಂದ ನಂದಿನಿ ಶುದ್ದ ಕುಡಿಯುವ ನೀರಿನ ಘಟಕವನ್ನು ಗುರುವಾರ ಶಾಸಕ ವಿ. ಮನಿಯಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಕ್ಷೇತ್ರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗುತ್ತಿದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಯನ್ನು ದೂರ ಮಾಡಬಹುದಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ KMF ನಿರ್ದೇಶಕ ಶ್ರೀನಿವಾಸ ರಾಮಯ್ಯ, ಗಂಗನಹಳ್ಳಿ ವೆಂಕಟೇಶ್, ಮೇಲೂರು ಮಂಜುನಾಥ್, ಮುಳ್ಳೂರು SFCS ವೆಂಕರೆಡ್ಡಿ, ಡಿ. ಎಂ. ಶಂಕರ್ ರೆಡ್ಡಿ ಇನ್ನು ಇತರರು ಹಾಜರಿದ್ದರು.