ಮೇಲೂರು ಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ

ಮೇಲೂರು ಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಗೌರಿ ಗಣೇಶ ಹಬ್ಬದ ಅಂಗವಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಸರೋಜ ಎಸ್.ಎಂ. ಅವರು ಶನಿವಾರ ಬಾಗಿನ ನೀಡಿ ಶುಭ ಕೋರಿದರು.

In English: Melur Government High School honoured its midday-meal kitchen staff with Gowri Ganesha festival bagina gifts, with school committee members and the headmaster praising the women’s role in child nutrition and citing the scheme’s impact on school enrolment and retention, especially for girls.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ. ಉಮೇಶ್, “ಬಿಸಿಯೂಟ ನೌಕರರು ಮಕ್ಕಳ ಪೌಷ್ಟಿಕತೆ ಹಾಗೂ ಆರೋಗ್ಯದ ರಕ್ಷಕರಾಗಿದ್ದಾರೆ. ಮಕ್ಕಳಿಗೆ ಬಿಸಿ, ಶುಚಿ ಹಾಗೂ ಪೌಷ್ಟಿಕ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮೂಲಕ ಅವರ ಆರೋಗ್ಯಕರ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ” ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಸರೋಜ ಎಸ್.ಎಂ. ಮಾತನಾಡಿ, “ಬಡ ಕುಟುಂಬಗಳ ಮಕ್ಕಳಿಗೆ ಬಿಸಿಯೂಟ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಯೋಜನೆಯಿಂದ ಶಾಲಾ ದಾಖಲಾತಿ ಹೆಚ್ಚುವುದರ ಜತೆಗೆ, ಶಾಲೆಯಿಂದ ಮಧ್ಯದಲ್ಲೇ ಹೊರಗುಳಿಯುವ ಮಕ್ಕಳ ಸಂಖ್ಯೆಯೂ ಕಡಿಮೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇದು ಹೆಚ್ಚಿನ ಪ್ರೋತ್ಸಾಹ ನೀಡಿದೆ. ಬಿಸಿಯೂಟ ನೌಕರರು ಶಾಲೆಯ ಅವಿಭಾಜ್ಯ ಅಂಗವಾಗಿದ್ದಾರೆ” ಎಂದು ಹೇಳಿದರು.

ಮುಖ್ಯಶಿಕ್ಷಕ ಎಚ್.ಎಂ. ಭಾಸ್ಕರ್ ಮಾತನಾಡಿ, “ಶಾಲೆಯಲ್ಲಿ ವಿವಿಧ ಜಾತಿ, ಧರ್ಮಗಳ ಮಕ್ಕಳು ಒಟ್ಟಿಗೆ ಕುಳಿತು ಊಟ ಮಾಡುವುದರಿಂದ ಸಮಾನತೆಯ ಮನೋಭಾವ ಬೆಳೆಯುತ್ತದೆ. ಮಕ್ಕಳಿಗೆ ಶ್ರದ್ಧೆಯಿಂದ ಬಿಸಿಯೂಟ ತಯಾರಿಸಿ ನೀಡುತ್ತಿರುವ ಅಡುಗೆ ಸಿಬ್ಬಂದಿಯ ಸೇವೆ ಶ್ಲಾಘನೀಯ” ಎಂದರು.

ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Share
error: Content is protected !!