ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (SKDRDP) ಮೇಲೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಗ್ರಾಮ ಪಂಚಾಯಿತಿ ಪಿಡಿಓ ಶಾರದ ಉದ್ಘಾಟಿಸಿದರು. ಯೋಜನಾಧಿಕಾರಿ ಪ್ರಕಾಶ್‌ಕುಮಾರ್, ಮೇಲ್ವಿಚಾರಕಿ ಅನಿತ ಹಾಜರಿದ್ದರು.