Home News ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಪುನರಾರಂಭೋತ್ಸವ

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಪುನರಾರಂಭೋತ್ಸವ

0
Government School Mid Dy Meals Program

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಕ್ಷರ ದಾಸೋಹ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಮಧ್ಯಾಹ್ನದ ಬಿಸಿಯೂಟ ಅಕ್ಷರದಾಸೋಹ ಪುನರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಹ ವಯಸ್ಸಿನ ಎಲ್ಲಾ ಮಕ್ಕಳಲ್ಲಿಯೂ ಅಪೌಷ್ಟಿಕತೆಯನ್ನು ಹೋಗಲಾಡಿಸಿ ದೈಹಿಕವಾಗಿ ಸದೃಡಗೊಳಿಸುವುದಲ್ಲದೇ ಮಾನಸಿಕವಾಗಿ ಮಕ್ಕಳನ್ನು ಸಬಲಗೊಳಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಪಂಚಾಯಿತಿ ಸಹಾಯಕ ಕಾರ್ಯದರ್ಶಿ, ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶೈಲಜಾ ತಿಳಿಸಿದರು.

ಸರ್ಕಾರವು ಮಕ್ಕಳಲ್ಲಿ ರೋಗನಿರೋಧಕಶಕ್ತಿಯನ್ನು ಹೆಚ್ಚಿಸಲು, ಅರ್ಹವಯಸ್ಸಿನ ಎಲ್ಲಾ ಮಕ್ಕಳಿಗೂ ಕಡ್ಡಾಯ ಮತ್ತು ಉಚಿತ ಶಿಕ್ಷಣ ನೀಡಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಮಾತನಾಡಿ, ಮಧ್ಯಾಹ್ನಬಿಸಿಯೂಟ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ ಗಣನೀಯವಾಗಿ ಹೆಚ್ಚಿದೆ. ಕೊರೊನಾ ಹಾವಳಿಯಿಂದ ಸ್ಥಗಿತಗೊಂಡಿದ್ದ ಬಿಸಿಯೂಟ ಯೋಜನೆ ಪ್ರಾರಂಭವಾಗಿದ್ದು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ಆಂಜನೇಯ ಮಾತನಾಡಿ, ಸುಗಟೂರು ಸರ್ಕಾರಿ ಶಾಲೆಯ ಮಕ್ಕಳು ರಾಷ್ಟ್ರೀಯ ಮಟ್ಟದ ಮಕ್ಕಳ ಶಿಬಿರಗಳಲ್ಲಿ ಪಾಲ್ಗೊಂಡಿದ್ದು ರಾಷ್ಟ್ರಮಟ್ಟದ ಪ್ರತಿಭಾನ್ವೇಷನಾ ಪರೀಕ್ಷೆಗಳಲ್ಲಿಯೂ ಉತ್ತೀರ್ಣರಾಗುತ್ತಿದ್ದು ಕಲಿಕೆಯಲ್ಲಿಯೂ ಮುಂದಿರುವುದು ಶ್ಲಾಘನೀಯ ಎಂದರು.

ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಬಿಸಿಯೂಟ ಯೋಜನೆಯು ಇದೀಗ ಪಿಎಂ ಪೋಷಣ್ ಶಕ್ತಿನಿರ್ಮಾಣ್ ಯೋಜನೆಯಾಗಿ ಬದಲಾಗಿದೆ. ಪೌಷ್ಟಿಕಾಂಶಯುತ ಆಹಾರವನ್ನು ಬಾಲ್ಯದಿಂದಲೇ ವಿತರಿಸುವ ಮೂಲಕ ಮಕ್ಕಳನ್ನು ಸದೃಢಗೊಳಿಸಲಾಗುತ್ತಿದೆ ಎಂದರು.

 ಬಿಸಿಯೂಟ ಯೋಜನೆಗೆ ಚಾಲನೆ ನೀಡಲಾಯಿತು. ಸುಮಾರು ಒಂದೂವರೆ ವರ್ಷದ ನಂತರ ಶಾಲೆಗಳಲ್ಲಿ ಶುಚಿಯಾದ ಬಿಸಿಯೂಟವನ್ನು ಮಕ್ಕಳು ಸವಿದರು. ಅಧಿಕಾರಿಗಳು ಮಾದರಿ ಶಾಲಾ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಲೇಖನಸಾಮಗ್ರಿಗಳನ್ನು ವಿತರಿಸಲಾಯಿತು.

 ಗ್ರಾಮಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ದೇವರಾಜು, ಸದಸ್ಯ ಸತೀಶ್‌ಕುಮಾರ್, ಶಿವಶಂಕರಪ್ಪ, ಎಂ.ನಾಗರಾಜು, ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ, ದೇವರಾಜು, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ನಾರಾಯಣಸ್ವಾಮಿ, ಸದಸ್ಯೆ ಪುಷ್ಪಲತಾ, ದೊಡ್ಡಮುನಿವೆಂಕಟಶೆಟ್ಟಿ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version