ಶಿಡ್ಲಘಟ್ಟ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಚಾವಣೆ ಕುಸಿದಿರುವ ನಗರದ ಜೌಗುಪೇಟೆಯ ಜಯಲಕ್ಷ್ಮಿ ಅವರ ಮನೆಗೆ ಬುಧವಾರ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ಹತ್ತು ಸಾವಿರ ರೂಗಳ ಆರ್ಥಿಕ ನೆರವನ್ನು ನೀಡಿ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪುಟ್ಟು ಮಾತನಾಡಿದರು.
ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಪ್ರತಿಯೊಬ್ಬರೂ ಮುಂದಾಗಬೇಕು. ಕಳೆದ ಏಳೆಂಟು ವರ್ಷಗಳಿಂದ ವಿವಿಧ ರೀತಿಯ ಸಂಕಷ್ಟಗಳಿಗೆ ಸಿಲುಕಿದ ಕುಟುಂಬಗಳಿಗೆ ನೆರವು ಹಾಗೂ ಕೋವಿಡ್ ಹಿನ್ನಲೆಯಲ್ಲಿ ಕ್ಷೇತ್ರದಾದ್ಯಂತ ಆಹಾರ ಪದಾರ್ಥಗಳ ವಿತರಣೆ ಆಸ್ಪತ್ರೆಗೆ ಅಗತ್ಯವಿರುವ ಔಷಧಿಗಳನ್ನು ಟ್ರಸ್ಟ್ ಮೂಲಕ ವಿತರಿಸುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಕಳೆದ ಎರಡು ದಿನಗಳ ಹಿಂದೆ ಮನೆಯ ಮೇಲ್ಚಾವಣಿ ಕುಸಿದು ಸಂಕಷ್ಟಕ್ಕೆ ಸಿಲುಕಿದ ಜಯಲಕ್ಷ್ಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದು ಅವರು ಹೇಳಿದರು.
ಜಗತ್ತಿನಾದ್ಯಂತ ಕಳೆದ ಎರಡು ವರ್ಷಗಳಿಂದ ಕಾಡುತ್ತಿರುವ ಕೊರೊನಾ ಬಗ್ಗೆ ಭಯ ಬೀಳದೆ ಪ್ರತಿಯೊಬ್ಬರೂ ಜಾಗೃತೆ ವಹಿಸಬೇಕು. ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಳ್ಳುವ ಮೂಲಕ ಮಹಾ ಮಾರಿಯನ್ನು ನಿರ್ಮೂಲನೆ ಮಾಡಲು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ದೇವರಾಜು, ಗುಡಿಹಳ್ಳಿ ನಾರಾಯಣಸ್ವಾಮಿ, ಶಂಕರ್, ಕೃಷ್ಣಪ್ಪ, ಖದೀರ್ ಪಾಷ್, ನೂರುಲ್ಲಾ, ಶಬೀರ್, ಜಮೀರ್, ಜಬೀಉಲ್ಲಾ, ಮಹಬೂಬ್ ಪಾಷ್, ರಾಮಾಂಜಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi