Sidlaghatta : ಶಿಡ್ಲಘಟ್ಟ ನಗರಸಭೆ ಸದಸ್ಯ, ವಕೀಲರೂ ಆಗಿರುವ ಎಂ.ಮುನಿರಾಜು ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆಯ ಮೇರೆಗೆ ಹಿರಿಯ ವಕೀಲ, ಕೆಪಿಸಿಸಿ ಕಾನೂನು, ಮಾನವಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆದೇಶ ಹೊರಡಿಸಿದ್ದಾರೆ.
ಪಕ್ಷದ ಮುಖಂಡರ ಮಾರ್ಗದರ್ಶನ ಹಾಗು ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿ ಆದೇಶ ಪತ್ರ ನೀಡಿದ್ದಾರೆ.