Sidlaghatta : ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಆಗುವ ಜೊತೆಗೆ ಕಲಿಕೆಯಲ್ಲಿಯೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಹೇಳಿದರು.
ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯಲ್ಲಿ ನೂತನ ಸ್ಕೌಟ್ ಮತ್ತು ಗೈಡ್ ಘಟಕಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ಕೌಟ್ಸ್ ಅಂಡ್ ಗೈಡ್ಸ್ ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಜೊತೆಗೆ ಪರಿಸರ ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಈಗಾಗಲೇ ಸುಮಾರು ೨೧೬ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ಫೀಳಿಗೆಗೆ ಉತ್ತಮ ನಾಗರೀಕರನ್ನು ರೂಪಿಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿರ್ವಹಿಸುತ್ತಿದೆ ಹಾಗಾಗಿ ಎಲ್ಲ ವಿದ್ಯಾರ್ಥಿಗಳು ಸ್ಕೌಟ್ಸ್ ಅಂಡ್ ಗೈಡ್ಸ್ ಸೇರುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದರು.
ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ರೂಪಿಸಿ ರಮೇಶ್ ಮಾತನಾಡಿ ತಾವು ಸಹ ಬಾಲ್ಯದಲ್ಲಿ ಸ್ಕೌಟ್ ವಿದ್ಯಾರ್ಥಿಯಾಗಿದ್ದು ನಮ್ಮ ಜೀವನದಲ್ಲಿ ಏನಾದರೂ ಸಾಧನೆ ಮಾಡಿದ್ದಲ್ಲಿ ಅದಕ್ಕೆ ಸ್ಕೌಟ್ ಗೈಡ್ಸ್ ಸಂಸ್ಥೆಯಲ್ಲಿ ಕಲಿತ ಶಿಸ್ತು ಕಾರಣವಾಗಿದೆ. ವಿದ್ಯಾರ್ಥಿಗಳು ಸಹ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಿಗುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಶಿವಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಸಿ.ಕೆ.ರವಿ. ಕಚೇರಿಯ ಕಾರ್ಯನಿರ್ವಾಹಕ ಹರೀಶ್‌ಕುಮಾರ್, ಶಾಲೆಯ ಸ್ಕೌಟ್ ಶಿಕ್ಷಕ ರವಿಚಂದ್ರ, ಗೈಡ್ ವಿಭಾಗದ ಶಿಕ್ಷಕಿ ರೂಪ ಹಾಜರಿದ್ದರು.