Home News ನರೇಗಾ ಯೋಜನೆ ಅನುಷ್ಟಾನದಲ್ಲಿ ಶಿಡ್ಲಘಟ್ಟ ಜಿಲ್ಲೆಗೆ ದ್ವಿತೀಯ, ಬದು ನಿರ್ಮಾಣದಲ್ಲೂ ಎರಡನೇ ಸ್ಥಾನ

ನರೇಗಾ ಯೋಜನೆ ಅನುಷ್ಟಾನದಲ್ಲಿ ಶಿಡ್ಲಘಟ್ಟ ಜಿಲ್ಲೆಗೆ ದ್ವಿತೀಯ, ಬದು ನಿರ್ಮಾಣದಲ್ಲೂ ಎರಡನೇ ಸ್ಥಾನ

0

ಲಾಕ್ ಡೌನ್ ಕಾಲದಲ್ಲಿ ಮತ್ತು ಕೊರೊನಾ ಸಂಕಷ್ಟದಲ್ಲಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗವನ್ನು ಕೊಟ್ಟಿದ್ದು ನರೇಗಾ ಯೋಜನೆ. ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಉದ್ದೇಶದಿಂದ ಪ್ರಾರಂಭವಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿ ಮತ್ತು ಬದು ನಿರ್ಮಾಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಶಿಡ್ಲಘಟ್ಟ ತಾಲ್ಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

 2020-21 ನೇ ಸಾಲಿಗೆ ತಾಲ್ಲೂಕಿನಲ್ಲಿ 18,12,500 ಮಾನವ ದಿನಗಳ ಸೃಜನೆಯ ಗುರಿಯನ್ನು ನಿಗದಿಪಡಿಸಲಾಗಿತ್ತು. ಅದರಲ್ಲಿ ಕೇವಲ ನಾಲ್ಕೇ ತಿಂಗಳ ಅವಧಿಯಲ್ಲಿ 7,50,821 ಮಾನವ ದಿನಗಳಷ್ಟು ಕೆಲಸವನ್ನು (ಶೇ 41.62) ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ  ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಶಸ್ಸನ್ನು ಸಾಧಿಸಿದೆ.

 ಸಮರ್ಪಕವಾಗಿ ಮಳೆ ಬೀಳದೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ತಾಲ್ಲೂಕಿನ ಗ್ರಾಮೀಣ ಜನರಿಗೆ ಅದರಲ್ಲೂ ಸಣ್ಣ ರೈತರು ಮತ್ತು ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕೈ ಹಿಡಿದಿದೆ. ರೈತರು ತಮ್ಮ ಜಮೀನುಗಳಲ್ಲಿ ಬೆಳೆ ವಿಸ್ತರಣೆಗೆ, ಬದು ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಸಾಕಷ್ಟು ಧನ ಸಹಾಯ ಸಿಗುತ್ತಿದೆ. ಮಹಿಳೆಯರು ಸಹ ಪುರುಷರಷ್ಟೇ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

  ಅಂತರ್ಜಲ ವೃದ್ಧಿಸಲು ನರೇಗಾ ಯೋಜನೆಯಡಿ ಪ್ರಾಜೆಕ್ಟ್ 100 ಯೋಜನೆ ಮೂಲಕ ಸರ್ಕಾರಿ ಶಾಲೆಗೆ ಕಾಂಪೌಂಡ್, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಮಳೆ ನೀರು ಸಂಗ್ರಹಿಸಲು ಮತ್ತು ಭೂಮಿಯ ಫಲವತ್ತತೆ ಹೆಚ್ಚಿಸಲು ಬದುಗಳ ನಿರ್ಮಾಣ ನಡೆದಿದೆ. ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಎಂಬ ಧ್ಯೇಯ ವಾಕ್ಯದಡಿ ಕಳೆದ ಮೂರು ತಿಂಗಳ ಅವಧಿಯಲ್ಲಿ ರೈತರ ಹೊಲಗಳಲ್ಲಿ ನಿರ್ಮಾಣವಾದ ಬದುಗಳ ಸಂಖ್ಯೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದೆ (1624). ಕೊರೊನಾ ಸಂಕಷ್ಟದಲ್ಲಿ ಕೂಲಿಕಾರ್ಮಿಕರಿಗೆ ಉದ್ಯೋಗ ನೀಡಿದ ನರೇಗಾ ಯೋಜನೆ ಬದುಗಳ ನಿರ್ಮಾಣಕ್ಕೆ ನೆರವಾಗುವ ಮೂಲಕ ರೈತರ ಪಾಲಿಗೂ ವರದಾನವಾಗಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi