ಚಿತ್ರನಟ ಪವನ್ ಕಲ್ಯಾಣ್ ಹುಟ್ಟುಹಬ್ಬದ ಅಂಗವಾಗಿ ಶಿಡ್ಲಘಟ್ಟ ನಗರದ ಸ್ಪೂರ್ತಿದಾಯ ಸಂಘದ ವತಿಯಿಂದ ಗುರುವಾರ ಸಾರ್ವಜನಿಕ ಆಸ್ಪತ್ರೆಯ ಬಳಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿದರು.
ಅಪಘಾತಗಳಂತಹ ತುರ್ತು ಸಂದರ್ಭಗಳಲ್ಲಿ ದಾನಿಗಳಿಂದ ಸಂಗ್ರಹಿಸಲಾದ ರಕ್ತ ಮತ್ತೊಬ್ಬರ ಜೀವ ರಕ್ಷಣೆ ಮಾಡಲಿದೆ. ನಾವು ನೀಡುವ ಒಂದು ಯೂನಿಟ್ ರಕ್ತ ಒಂದು ಜೀವವನ್ನು ಉಳಿಸುತ್ತದೆ. ಪ್ರತಿ ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಅವರು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ವಾಣಿ, ಪವನ್ ಕಲ್ಯಾಣ್ ಅಭಿಮಾನಿಗಳ ಸಂಘದ ಕೆ.ಶಶಿಕುಮಾರ್, ಶ್ರೀನಿವಾಸ್, ಸುಬ್ರಮಣಿ, ರಾಮಚಂದ್ರ, ಮನೋಹರ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi