ನಗರದ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಎನ್ ಎಸ್ ಯು ಐ ರಾಜ್ಯ ಸಂಚಾಲಕ ಕೆ.ಎನ್.ಮುನೀಂದ್ರ ಮಾತನಾಡಿದರು.
ಕೊರೊನಾ ಹಿನ್ನಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಬಳಲುತ್ತಿರುವ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ರೀತಿ ನಡೆದುಕೊಳ್ಳುತ್ತಿದೆ. ಸಾಲದ್ದಕ್ಕೆ ಪ್ರತಿನಿತ್ಯ ಇಂಧನ ಧರ ಹೆಚ್ಚಿಸುವುದಷ್ಟೇ ಅಲ್ಲದೇ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದಿನೇ ದಿನೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಲಾಯಿತು.
ಎನ್ ಎಸ್ ಯು ಐ ತಾಲ್ಲೂಕು ಕಾರ್ಯದರ್ಶಿ ಪ್ರಸನ್ನ, ಪದಾಧಿಕಾರಿಗಳಾದ ವಿ. ದೇವರಾಜ್, ಮಂಜುನಾಥ್, ವೆಂಕಟೇಶ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi