ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿಯಲ್ಲಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ ಅಡಿಯಲ್ಲಿ ಮಕ್ಕಳು ಮತ್ತು ಪೌಷ್ಟಿಕ ಆಹಾರ ಕುರಿತಂತೆ ಸಮುದಾಯ ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಮಾಲೋಚನಾ ಸಭೆ ಹಾಗೂ ಸಮುದಾಯ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪೋಷಣ್ ಅಭಿಯಾನ್ ತಾಲ್ಲೂಕು ಸಂಯೋಜಕಿ ದೀಕ್ಷಾ ಮಾತನಾಡಿದರು.
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಲು ಗರ್ಭಿಣಿ ಬಾಣಂತಿಯರಿಗೆ ಮತ್ತು ಶಿಶು, ಮಗುವಿನ ಪ್ರಾಯದಲ್ಲಿ ಸಮರ್ಪಕವಾಗಿ ಪೌಷ್ಟಿಕ ಆಹಾರವನ್ನು ನೀಡಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಹಾಗೂ ಬಶೆಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಿರಿಜೇಶ್ ಅವರುಗಳು ಮಕ್ಕಳಿಗೆ ಪೌಷ್ಟಿಕ ಆಹಾರದಿಂದ ಆಗುವ ಪ್ರಯೊಜನಗಳ ಬಗ್ಗೆ ಮಾಹಿತಿ ನೀಡಿದರು.
ಚೈಲ್ಡ್ ರೈಟ್ಸ್ ಟ್ರಸ್ಟ್ ಸಂಸ್ಥೆಯ ಜಯರಾಂ ಸತೀಶ್ ಹಾಗೂ ಸತೀಶ್.ಡಿ.ವಿ. ಅವರುಗಳು ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಸಮಾಲೋಚನೆ ಮಾಡಿ ಅಪೌಷ್ಟಿಕತೆ ಹೋಗಲಾಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬಶೆಟ್ಟಿಹಳ್ಳಿ ವೃತ್ತದಲ್ಲಿ ಅಂಗನವಾಡಿ ಸೇವೆಯಿಂದ ನಿವೃತ್ತರಾದ ಮೇಲ್ವಿಚಾರಕಿಯಾದ ಗಿರಿಜಮ್ಮ ಹಾಗೂ ಇತರೆ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಿದರು.
ಅಂಗನವಾಡಿ ಮೇಲ್ವಿಚಾರಕಿಯರಾದ ರೋಜಾರಮಣಿ, ರಾಧಾ, ಚೈಲ್ಡ್ ರೈಟ್ಸ್ ಟ್ರಸ್ಟ್ ಸಂಸ್ಥೆಯ ರಾಮಕೃಷ್ಣಪ್ಪ, ಆರೋಗ್ಯ ಇಲಾಖೆಯ ಪ್ರತಿಭಾ, ಸಮೀರಾ ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿ ಗಂಗಪ್ಪ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi