ಶಿಡ್ಲಘಟ್ಟ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಕೋವಿಡ್ ಇರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಿಸುತ್ತಿದ್ದು ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್ ತರಗತಿಯ ಶಿಕ್ಷಣ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳು ಜಾರಿಗೆ ತಂದಿದ್ದು ಪದವಿ ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಟ್ಯಾಬ್ ವಿತರಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರಸಕ್ತ ಪದವಿ ಪ್ರಥಮ ವರ್ಷದ 131 ಮಂದಿ ವಿದ್ಯಾರ್ಥಿಗಳ ಪೈಕಿ 10 ಮಂದಿಗೆ ಮಾತ್ರ ಸಾಂಕೇತಿಕವಾಗಿ ಟ್ಯಾಬ್ ವಿತರಿಸಲಾಗಿದ್ದು ಉಳಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಟ್ಯಾಬ್ ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಜಿ.ಮುರಳಿಆನಂದ್, ನಗರಸಭೆ ಪೌರಾಯಕ್ತ ಶ್ರೀನಿವಾಸ್, ನಗರಠಾಣೆ ಪಿಎಸ್ಸೈ ಸತೀಶ್, ಪ್ರಾಧ್ಯಾಪಕರಾದ ಡಾ.ವಿ.ವೆಂಕಟೇಶ್, ಜಿ.ಕೆ.ರಮೇಶ್, ಕೆ.ಉಮೇಶ್‌ರೆಡ್ಡಿ ಮತ್ತು ಸಿಬ್ಬಂದಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi