Sidlaghatta : ಮಾರ್ಚ್ 3 ರಿಂದ 6 ವರೆಗೆ ತಾಲ್ಲೂಕಿನಾದ್ಯಂತ 106 ಬೂತ್ ಗಳಲ್ಲಿ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಗ್ರಾಮೀಣ ಭಾಗದಲ್ಲಿ 80 ಬೂತ್ ಗಳಲ್ಲಿ ಹಾಗೂ ನಗರದಲ್ಲಿ 26 ಬೂತ್ ಗಳಲ್ಲಿ ಪೊಲಿಯೋ ಲಸಿಕೆ ಹಾಕಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮದ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಳಗ್ಗೆ 8 ರಿಂದ ಸಂಜೆ 5 ರವರೆಗೂ ಲಸಿಕೆ ಹಾಕಲಿದ್ದು ಐದು ವರ್ಷದೊಳಗಿನ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಿಕೊಳ್ಳಿ. ನಮ್ಮ ತಾಲ್ಲೂಕನ್ನು ಪೊಲಿಯೋ ಮುಕ್ತ ತಾಲ್ಲೂಕನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಅವರು ಕೋರಿದರು.
ತಾಲ್ಲೂಕು ಆರೋಗ್ಯ ನಿರೀಕ್ಷಕ ದೇವರಾಜ್, ಹಿರಿಯ ಸುರಕ್ಷಣಾಧಿಕಾರಿ ಮುನಿರತ್ನಮ್ಮ, ಕಾರ್ಯಕ್ರಮ ವ್ಯವಸ್ಥಾಪಕಿ ನಂದಿನಿ, ಆಶಾ ಮೇಲ್ವಿಚಾರಕಿ ಗೀತಾ, ಅಫ್ರೋಜ್, ಕೀರ್ತಿ, ಸುನಿಲ್, ಚೈತ್ರ, ಜಾವಿದಾ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.