
ಕೊರೊನಾ ಎರಡನೇ ಅಲೆಯಿಂದಾಗಿ ಇಡೀ ದೇಶವೇ ತತ್ತರಿಸುತ್ತಿದೆ. ಇದನ್ನು ತಡೆಯಲೆಂದು ಲಾಕ್ ಡೌನ್ ಮಾಡಲಾಗಿದೆ. ಇದರಿಂದಾಗಿ ರೈತರು ಬೆಳೆದಿರುವ ಹೂ, ಹಣ್ಣು, ತರಕಾರಿ, ರೇಷ್ಮೆ ಹಾಗೂ ಹೈನುಗಾರಿಕೆ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ಬೆಲೆಗಳು ಕುಸಿದಿವೆ. ಇದರ ಜೊತೆಗೆ ರಾಸಾಯನಿಕ ಗೊಬ್ಬರಗಳ ಹಾಗೂ ಕೀಟನಾಶಕಗಳ ಬೆಲೆ 50% ಏರಿಕೆಯಾಗಿವೆ. ರೈತರು ತಮ್ಮ ಬೆಳೆಗಳನ್ನು ಯಾರೂ ಕೇಳುವವರಿಲ್ಲದೆ, ಹಾಕಿದ ಬಂಡವಾಳ ಕೈಗೆ ಸಿಗದೆ, ಕೊಯ್ಲು ಮಾಡುವ ಕೂಲಿ ಸಹ ಸಿಗದೆ ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಮಧ್ಯೆ ಪ್ರವೇಶಿಸಬೇಕು. ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು. ರೈತರಿಗೆ ನಷ್ಠ ಪರಿಹಾರವನ್ನು ಒದಗಿಸಬೇಕು. ಆಮ್ಲಜನಕದ ಕೊರತೆಯಿಂದ ಮೃತಪಟ್ಟವರ ಕುಟುಂಬದವರಿಗೆ 20 ಲಕ್ಷ ರೂ ಪರಿಹಾರ ನೀಡಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಒತ್ತಾಯಿಸಿದರು.
ಕೊರೊನಾ ಹಾವಳಿ ಹಾಗೂ ಲಾಕ ಡೌನ್ ನಿಂದಾಗಿ ರೈತರಿಗೆ ಆಗಿರುವ ತೊಂದರೆಗಳಿಗೆ ಸರ್ಕಾರ ಮಧ್ಯ ಪ್ರವೇಶಿಸಿ ನೆರವು ನೀಡಬೇಕೆಂದು ಬುಧವಾರ ತಹಶೀಲ್ದಾರ್ ರಾಜೀವ್ ಅವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದರು.
ರೈತಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ವೇಣುಗೋಪಾಲ್, ರಾಮಚಂದ್ರಪ್ಪ, ದೇವರಾಜ್, ಕೆಂಪಣ್ಣ, ಸುರೇಶ್ ಕುಮಾರ್ ಹಾಜರಿದ್ದರು.
Follow ನಮ್ಮ ಶಿಡ್ಲಘಟ್ಟ on
Facebook: https://www.facebook.com/sidlaghatta
Twitter: https://twitter.com/hisidlaghatta
Instagram: https://www.instagram.com/sidlaghatta
Telegram: https://t.me/Sidlaghatta